ಚಿಕ್ಕೋಡಿ: ಸಹೋದರರಿಬ್ಬರು ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಪರಸ್ಪರ ಹೊಡೆದಾಡಿಕೊಂಡು ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಳಗಾವಿಯ (Belagavi) ಅಥಣಿ (Athani) ತಾಲೂಕಿನ ಖೋತವಾಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೃತರನ್ನು ಹನುಮಂತ ರಾಮಚಂದ್ರ ಖೋತ (35) ಹಾಗೂ ಖಂಡೋಭಾ ತಾನಾಜಿ ಖೋತ (30) ಎಂದು ಗುರುತಿಸಲಾಗಿದೆ. ಭೂ ವಿವಾದ ಹಿನ್ನೆಲೆಯಲ್ಲಿ ಸಹೋದರ ಸಂಬಂಧಿಗಳ ನಡುವೆ ಜುಲೈ 22ರಂದು ರಾತ್ರಿ ಗಲಾಟೆ ನಡೆದಿತ್ತು. ಈ ಸಂದರ್ಭದಲ್ಲಿಒಬ್ಬರಿಗೊಬ್ಬರು ಮಾರಕಾಸ್ತ್ರಗಳಿಂದ ಹೊಡೆದಾಡಿಕೊಂಡಿದ್ದಾರೆ.
ಈ ವೇಳೆ ಮಾರಕಾಸ್ತ್ರಗಳಿಂದ ಇಬ್ಬರಿಗೂ ಹೆಚ್ಚಿನ ಪೆಟ್ಟುಗಳಾಗಿವೆ. ತೀವ್ರವಾಗಿ ಗಾಯಗೊಂಡಿದ್ದ ಇಬ್ಬರನ್ನೂ ಮಹಾರಾಷ್ಟ್ರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಬ್ಬರೂ ಸಾವನ್ನಪ್ಪಿದ್ದಾರೆ. ಈ ಕುರಿತು ಅಥಣಿ ಪೊಲೀಸ್ (Athani Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಬೆಳಗಾವಿ ಎಸ್ಪಿ ಭೀಮಶಂಕರ್ ಗುಳೇದ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.








