ರಾಮನಗರ: ಡಿಸಿಎಂ ಡಿ.ಕೆ. ಶಿವಕುಮಾರ್(D.K.Shivakumar) ಅವರು ರಾಮನಗರ ಚಾಮುಂಡೇಶ್ವರಿ ಕರಗ ಮಹೋತ್ಸವದಲ್ಲಿ ಭಾಗಿಯಾಗಿದ್ದರು. ಈ ವೇಳೆ ಭಾಷಣ ಮಾಡುತ್ತ ದರ್ಶನ್ (Darshan) ಅವರ ಪತ್ನಿ ಭೇಟಿ ಮಾಡೋಕೆ ಸಮಯ ಕೇಳಿದ್ದಾರೆ. ನಾಳೆ ಬೆಳಗ್ಗೆ ಅವರನ್ನ ಭೇಟಿ ಮಾಡ್ತೇನೆ ಎಂದು ಅಭಿಮಾನಿಗಳಿಗೆ ಭರವಸೆ ನೀಡಿದರು. ಈ ವೇಳೆ ಅಭಿಮಾನಿಗಳು ಖುಷಿಯಿಂದ ಡಿ ಬಾಸ್…ಡಿ ಬಾಸ್ ಎಂದು ಘೋಷಣೆ ಕೂಗಿದ್ದಾರೆ.
ಅನ್ಯಾಯ ಆಗಿದ್ರೆ ಸರಿಪಡಿಸಲು ಪ್ರಯತ್ನ ಮಾಡುತ್ತೇವೆ. ಆದರೆ, ಎಲ್ಲರೂ ಕಾನೂನಿಗೆ ಗೌರವ ಕೊಡಬೇಕು. ದೇಶದ ಹಾಗೂ ನೆಲದ ಕಾನೂನು ಪಾಲಿಸಬೇಕು. ಅನ್ಯಾಯ ಯಾರಿಗೇ ಆಗಿದ್ದರೂ ನಾವೆಲ್ಲ ಸೇರಿ ನ್ಯಾಯ ಒದಗಿಸುವ ಕೆಲಸ ಮಾಡೋಣ. ನೊಂದವರೆಲ್ಲರಿಗೂ ತಾಯಿ ಚಾಮುಂಡೇಶ್ವರಿ ಅನುಗ್ರಹ ನೀಡಲಿ ಎಂದು ಹೇಳಿದ್ದಾರೆ.








