ಕಲಬುರಗಿ: ಇಡೀ ಸಮಾಜವೇ ತಲೆ ತಗ್ಗಿಸಬೇಕಾದ ಘಟನೆಯೊಂದು ನಡೆದಿದೆ.
ಒಂದೂವರೆ ವರ್ಷದ ಹಸುಗೂಸಿನ ಮೇಲೆ ಕಾಮುಕ ಪಿಶಾಚಿಯೊಬ್ಬ ಅತ್ಯಾಚಾರ ನಡೆಸಿರುವ ಘಟನೆ ಕಲಬುರಗಿ(Kalaburagi) ಜಿಲ್ಲೆಯ ಆಳಂದ ತಾಲ್ಲೂಕಿನ ಗ್ರಾಮವೊಂದರಲ್ಲಿ ನಡೆದಿದೆ.
ಆರೋಪಿಯು ಮಗುವಿನ ಮೇಲೆ ವಿಕೃತಿ ಮೆರೆದಿರುವುದು ಪತ್ತೆಯಾಗಿದೆ. ಹೀಗಾಗಿ ಮಗುವಿನ ಮೇಲೆ ಅತ್ಯಾಚಾರದ ಶಂಕೆ ವ್ಯಕ್ತವಾಗಿದೆ. ಮಗುವನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವನ್ನಪ್ಪಿದೆ. ಈ ಕುರಿತು ನರೋಣಾ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಮತ್ತು ಕೊಲೆ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಬಲೆ ಬೀಸಿದ್ದಾರೆ.