ಉತ್ತರ ಕನ್ನಡ: ಜಿಲ್ಲೆಯ ಅಂಕೋಲಾ(Ankola) ತಾಲೂಕಿನ ಶಿರೂರು ಹತ್ತಿರ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿದು 10 ದಿನಗ ಕಳೆದಿವೆ. ಇಲ್ಲಿಯವರೆಗೆ 8 ಮೃತದೇಹಗಳು ಪತ್ತೆಯಾಗಿದ್ದು, ಶೋಧ ಕಾರ್ಯ ನಡೆಯುತ್ತಿದೆ.
ನಾಪತ್ತೆಯಾಗಿದ್ದ ಕೇರಳ ಮೂಲದ ಲಾರಿ ಗಂಗಾವಳಿ ನದಿಯಲ್ಲಿ ಇರುವುದು ಖಚಿತವಾಗಿದೆ. ಬೂಮ್ ಫೋಕ್ಲೇನ್ ಮೂಲಕ ಕಾರ್ಯಾಚರಣೆ ನಡೆಸಲಾಗಿದೆ. ಸದ್ಯ ಘಟನೆಯಲ್ಲಿ ಮತ್ತೋರ್ವ ತಮಿಳುನಾಡು ಮೂಲದ ಲಾರಿ ಚಾಲಕ ನಾಪತ್ತೆಯಾಗಿರುವ ಕುರಿತು ದೂರು ದಾಖಲಾಗಿದೆ.
ಶಿರೂರು ಹತ್ತಿರ ಆತನ ಟ್ಯಾಂಕರ್ ಗುಡ್ಡ ಕುಸಿತವಾದ ಪಕ್ಕದಲ್ಲೆ ಇತ್ತು. ಅದನ್ನು ಜಿಲ್ಲಾಡಳಿತದವರು ಬೇರೆ ಕಡೆ ಸ್ಥಳಾಂತರ ಮಾಡಿದ್ದರು. ಟ್ಯಾಂಕರ್ ಲಾರಿ ನಾಪತ್ತೆಯಾಗುತ್ತಿದ್ದಂತೆ ಚಾಲಕ ‘ಚಾಲಕ ಶರವಣ ನಾಪತ್ತೆ ಆದ ಬಗ್ಗೆ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆತನ ಮೊಬೈಲ್ ಬ್ಯಾಟರಿ ಕಡಿಮೆ ಆಗಿ ಮೊಬೈಲ್ ಸ್ವಿಚ್ ಆಫ್ ಆಗಿರಬಹುದು. ಆದ್ರೆ, ಬಹಳ ದಿನ ಕಳೆದರೂ ಮೊಬೈಲ್ ಆನ್ ಆಗದಿದಕ್ಕೆ ಹುಡುಕಾಟ ನಡೆಸಿದ್ದೇವೆ ಎಂದು ಕುಟುಂಬಸ್ತರು ದೂರು ದಾಖಲಿಸಿದ್ದಾರೆ.
ನಾಪತ್ತೆಯಾದ ನಾಲ್ವರ ಪತ್ತೆ ಆಗಬೇಕಿದ್ದು, ಕೇರಳ ಮೂಲದವರಾದ ಲಾರಿ ಚಾಲಕ ಅರ್ಜುನ್, ತಮಿಳುನಾಡು ಎಲ್ಪಿಜಿ ಗ್ಯಾಸ್ ಟ್ಯಾಂಕರ್ ಚಾಲಕ ಶರವಣನ್, ಗಂಗೆಕೊಳ ಗ್ರಾಮದ ಯುವಕ ಜಗನ್ನಾಥ್ ಹಾಗೂ ಲೋಕೇಶ್ ನಾಯ್ಕ್ ಗಾಗಿ ಈಗ ಶೋಧ ಕಾರ್ಯ ನಡೆದಿದೆ.








