ವಾಷಿಂಗ್ಟನ್: ಕಮಲಾ ಹ್ಯಾರಿಸ್ (Kamala Harris) ಮುಟ್ಟಿದ್ದೆಲ್ಲ ದುರಂತ. ಅವರು ಅಧಿಕಾರಕ್ಕೆ ಬಂದರೆ, ನಮ್ಮ ದೇಶ ಅವನತಿಯ ಹಾದಿ ಹಿಡಿಯುತ್ತದೆ ಎಂದು ಅಮೆರಿಕ ಮಾಜಿ ಅಧ್ಯಕ್ಷ, ಹಾಲಿ ರಿಪಬ್ಲಿಕ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ (Donald Trump) ವ್ಯಂಗ್ಯವಾಡಿದ್ದಾರೆ.
ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಮೂರುವರೆ ವರ್ಷಗಳಿಂದ ಕಮಲಾ ಹ್ಯಾರಿಸ್ ಅವರು ಜೋ ಬೈಡೆನ್ (Joe Biden) ಮಾಡಿದ ದುರಂತದ ಚಾಲನಾ ಶಕ್ತಿ ಇದ್ದಂತೆ. ಅವರು ಅಧಿಕಾರಕ್ಕೆ ಏರಿದರೆ ನಮ್ಮ ದೇಶವನ್ನು ದೇಶವನ್ನು ನಾಶಮಾಡುತ್ತಾರೆ. ಅಮೆರಿಕವನ್ನು (USA) ನಾಶ ಮಾಡಲು ನಾವು ಬಿಡುವುದಿಲ್ಲ. ಅವರಿಗೆ ಹಾಕಿದ ಮತ ನಾಲ್ಕು ವರ್ಷಗಳ ಅಪ್ರಾಮಾಣಿಕತೆ, ಅಸಮರ್ಥತೆ, ದೌರ್ಬಲ್ಯ ಮತ್ತು ವೈಫಲ್ಯಕ್ಕೆ ಹಾಕಿದಂತಾಗುತ್ತದೆ ಎಂದು ಹೇಳಿದ್ದಾರೆ.
ಉಕ್ರೇನ್ ದಾಳಿ ಮಾಡದಂತೆ ರಷ್ಯಾವನ್ನು ತಡೆಯಲು ಕಮಲಾ ಹ್ಯಾರಿಸ್ ಅವರನ್ನು ಯುರೋಪ್‌ಗೆ ಕಳುಹಿಸಿದಾಗ ಏನಾಯ್ತು? ಐದು ದಿನಗಳ ನಂತರ ರಷ್ಯಾ ದಾಳಿ ಮಾಡುವ ಮೂಲಕ ಉತ್ತರಿಸಿತು. ಪುಟಿನ್ ಏನಿಲ್ಲವೆಂಬಂತೆ ಅವರನ್ನು ನೋಡಿ ನಕ್ಕರು. ಕಮಲಾ ಮುಟ್ಟಿದ್ದೆಲ್ಲವೂ ಸಂಪೂರ್ಣ ವಿಪತ್ತಿಗೆ ಕಾರಣ ಎಂದು ಗುಡುಗಿದ್ದಾರೆ.








