ಬೆಂಗಳೂರು: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರಿಗೆ ಮತ್ತೊಂದು ಶಾಕ್ ಎದುರಾಗಿದೆ. ಬಸ್ ಪ್ರಯಾಣ ದರ ಹೆಚ್ಚಿಸಲು ಕೆಎಸ್ಆರ್ಟಿಸಿ (KSRTC) ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.
ಬಸ್ ಪ್ರಯಾಣ ದರ ಶೇ. 15 ರಿಂದ ಶೇ. 20ರವರೆಗೆ ಹೆಚ್ಚಿಸಲು ಜುಲೈ 14ರಂದೇ ರಾಜ್ಯ ಸರ್ಕಾರಕ್ಕೆ (Karnataka Govt) ಪ್ರಸ್ತಾವನೆ ಸಲ್ಲಿಸಿದೆ. ಈ ಕುರಿತು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಕೂಡ ಪ್ರಸ್ತಾವನೆ ಬಂದಿರುವುದು ಸತ್ಯ ಎಂದು ಒಪ್ಪಿಕೊಂಡಿದ್ದಾರೆ. ಆದರೆ, ಪ್ರಸ್ತಾವನೆ ನೋಡಿಲ್ಲ. ದರ ಏರಿಕೆ ಮಾಡುವ ಕುರಿತು ಸದ್ಯಕ್ಕೆ ಯಾವುದೇ ನಿರ್ಭಾರ ಇಲ್ಲ ಎಂದು ಹೇಳಿದ್ದಾರೆ.








