ADVERTISEMENT
Wednesday, September 2, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ವಯನಾಡು ದುರಂತ; ಕೈ, ಕಾಲು, ರುಂಡ, ದೇಹ ಕತ್ತರಿಸಿದ ಮೃತದೇಹಗಳು!

ಯಾರ ಕೈ, ಯಾರ ಕಾಲು, ಯಾರ ರುಂಡ?

Author2 by Author2
August 1, 2024
in National, ದೇಶ - ವಿದೇಶ
Share on FacebookShare on TwitterShare on WhatsappShare on Telegram

ವಯನಾಡು: ವಯನಾಡಿನ ಭೀಕರ ಸ್ಫೋಟಕ್ಕೆ ಇಡೀ ದೇಶವೇ ಕಣ್ಣೀರು ಸುರಿಸುತ್ತಿದೆ. ಪ್ರಕೃತಿ ಮಾತೆಯ ಅರ್ಧ ನಿಮಿಷದ ಮುನಿಸಿಗೆ ಸಾವಿರಾರೂ ಜನರ ಬದುಕು ಬೀದಿಗೆ ಬಂದು ನಿಂತಿದೆ. ನೂರಾರು ಕುಟಂಬಗಳು ತಮ್ಮ ಸದಸ್ಯರನ್ನು ಕಳೆದುಕೊಂಡು ಗೋಳಾಡುತ್ತಿವೆ.

ಮೃತದೇಹಗಳ ಸಂಖ್ಯೆ ಹೆಚ್ಚಾಗುತ್ತಿರುವುದರಿಂದಾಗಿ ಮಲ್ಪಾಡಿಯಲ್ಲಿನ ಸರ್ಕಾರಿ ಆಸ್ಪತ್ರೆಯ ಶವಾಗಾರವನ್ನು ತಾತ್ಕಾಲಿಕವಾಗಿ ಸಭಾಂಗಣಕ್ಕೆ ಶಿಫ್ಟ್ ಮಾಡಲಾಗಿದೆ. ತಮ್ಮವರ ಹೆಣ ಕಂಡ ಕೂಡಲೇ ಕೆಲವರು ಮುಗಿಲು ಮುಟ್ಟುವ ಆಕ್ರಂದನ ಅಲ್ಲಿ ಎಂಥವರನ್ನೂ ಬೆಚ್ಚಿ ಬೀಳಿಸುತ್ತಿದೆ. ಅಂಬುಲೆನ್ಸ್‌ನಲ್ಲಿ ಬಂದ ಹೆಣ ತಮ್ಮವರದಲ್ಲ ಎಂದಾಗ ಅಯ್ಯೋ ನಮ್ಮವರ ಹೆಣ ಸಿಗುತ್ತೋ ಇಲ್ವೋ ಎಂದು ಒದ್ದಾಡಿ, ದೇವರಿಗೆ ಪ್ರಾರ್ಥಿಸುತ್ತಿದ್ದಾರೆ.

Related posts

ಜಾಗತಿಕ ಅನಿಶ್ಚಿತತೆಯ ನಡುವೆಯೂ ಭಾರತ ವೇಗವಾಗಿ ಬೆಳೆಯುತ್ತಿದೆ: ಪ್ರಧಾನಿ ಮೋದಿ

ಜಾಗತಿಕ ಅನಿಶ್ಚಿತತೆಯ ನಡುವೆಯೂ ಭಾರತ ವೇಗವಾಗಿ ಬೆಳೆಯುತ್ತಿದೆ: ಪ್ರಧಾನಿ ಮೋದಿ

September 2, 2026
ಕಾವೇರಿ ನೀರು ವಿವಾದ: CWRCಗೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ

ಕಾವೇರಿ ನೀರು ವಿವಾದ: CWRCಗೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ

September 1, 2026

ದೇಹವೇ ಇರದ ಆರು ಬರೀ ಕೈಗಳು ಇಲ್ಲಿಯವರೆಗೆ ಸಿಕ್ಕಿವೆ. ಇವು ಯಾರ ಕೈ? ಪತ್ತೆ ಮಾಡುವುದು ಹೇಗೆ? ಇನ್ನೂ ಮೂರು ತಲೆ ಸಿಕ್ಕಿವೆ. ಆದರೆ ಮುಖದ ಗುರುತೇ ಸಿಗದ ಮಟ್ಟಕ್ಕೆ ಮುಖಗಳು ಜಜ್ಜಿ ಹೋಗಿವೆ. ಯಾರ ತಲೆ ಎನ್ನುವುದೇ ತಿಳಿಯುತ್ತಿಲ್ಲ. ಎಂಟು ಪ್ರತ್ಯೇಕವಾದ ಕಾಲು ಸಿಕ್ಕಿವೆ. ಐದು ತಲೆ ಇರದ ಅರ್ಧ ದೇಹ ಸಿಕ್ಕಿವೆ. ಎಲ್ಲವನ್ನೂ ತಂದು ಎನ್‌ಡಿಆರ್‌ಎಫ್‌ ಶವಗಾರ ಸೇರಿಸಿದ್ದಾರೆ. ಇದನ್ನು ನೋಡುತ್ತಿದ್ದರೆ ವಿಧಿಯ ಕ್ರೂರತೆಗೆ ಶಾಪ ಹಾಕುವಂತಾಗುತ್ತಿದೆ.

ಚೂರಲ್ಮಲ ಎಂಬ ಗ್ರಾಮಕ್ಕೆ ಸಮೃದ್ಧ ಊರು ಎಂಬ ಪಟ್ಟ. ಜೊತೆಗೆ ಇಲ್ಲಿದ್ದವರೆಲ್ಲ ಬಡತನದಲ್ಲೇ ಸುಖ ಉಂಡವರು. ಎಲ್ಲಾದಕ್ಕಿಂತಾ ಹೆಚ್ಚಾಗಿ ಶೇ.98 ಭಾಗದ ಜನ ಇಲ್ಲಿ ತಮ್ಮ ಸ್ವಂತ ಮನೆಗಳಲ್ಲೇ ವಾಸಿಸುತ್ತಿದ್ದರು. ಐಷಾರಾಮಿ ಅಲ್ಲದಿದ್ದರೂ ತಮ್ಮದು ಎಂದು ಒಂದು ಸ್ವಂತ ನೆಲೆ ಕಟ್ಟಿಕೊಂಡವರು ಚೂರಲ್ಮಲ ಗ್ರಾಮದ ಜನ. ಗ್ರಾಮದಲ್ಲಿ ಕಟ್ಟಿದ ಐದು ಮನೆಗಳಿಗೆ ಇನ್ನು ಒಂದು ಎರಡು ತಿಂಗಳಲ್ಲಿ ಗೃಹಪ್ರವೇಶ ಆಗಬೇಕಿತ್ತು. ಆದರೆ, ಇದರಲ್ಲಿ ಬಹುತೇಕರು ತಮ್ಮ ಸ್ವಂತ ಮನೆಗಳ ಜೊತೆಗೆ ಸಮಾಧಿಯಾಗಿದ್ದಾರೆ.

Tags: bodies cut off!feetlegsWayanad Tragedy; Dead bodies with hands
ShareTweetSendShare
Join us on:

Related Posts

ಜಾಗತಿಕ ಅನಿಶ್ಚಿತತೆಯ ನಡುವೆಯೂ ಭಾರತ ವೇಗವಾಗಿ ಬೆಳೆಯುತ್ತಿದೆ: ಪ್ರಧಾನಿ ಮೋದಿ

ಜಾಗತಿಕ ಅನಿಶ್ಚಿತತೆಯ ನಡುವೆಯೂ ಭಾರತ ವೇಗವಾಗಿ ಬೆಳೆಯುತ್ತಿದೆ: ಪ್ರಧಾನಿ ಮೋದಿ

by Shwetha
September 2, 2026
0

ಜಾಗತಿಕ ಅನಿಶ್ಚಿತತೆ, ಯುದ್ಧಗಳು ಹಾಗೂ ಪೂರೈಕೆ ಸರಪಳಿಯಲ್ಲಿನ ಅಡಚಣೆಗಳ ನಡುವೆಯೂ ಭಾರತ ವೇಗವಾಗಿ ಪ್ರಗತಿ ಸಾಧಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.ದೇಶವು 7.8% ಆರ್ಥಿಕ ಬೆಳವಣಿಗೆ...

ಕಾವೇರಿ ನೀರು ವಿವಾದ: CWRCಗೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ

ಕಾವೇರಿ ನೀರು ವಿವಾದ: CWRCಗೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ

by Shwetha
September 1, 2026
0

ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿ 15 ದಿನಗಳಿಗೊಮ್ಮೆ ಸಭೆ ನಡೆಸಿ, ಪರಿಷ್ಕೃತ ಮಾಹಿತಿಯನ್ನು ಸಲ್ಲಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC)ಗೆ ಸುಪ್ರೀಂ...

ರಾಹುಲ್ ಪ್ರಧಾನಿ ಅಭ್ಯರ್ಥಿಯಾಗದಿದ್ದರೆ ಮೈತ್ರಿ ಕಟ್:ಮೈತ್ರಿಗೆ ಕುತ್ತು ತರುತ್ತಾ ಪ್ರಧಾನಿ ಪಟ್ಟ? ವಿಜಯ್ ಕ್ಯಾಬಿನೆಟ್‌ಗೆ ಕೈಕೊಡಲು ಸಿದ್ಧವಾಯ್ತಾ ಕಾಂಗ್ರೆಸ್?

ರಾಹುಲ್ ಪ್ರಧಾನಿ ಅಭ್ಯರ್ಥಿಯಾಗದಿದ್ದರೆ ಮೈತ್ರಿ ಕಟ್:ಮೈತ್ರಿಗೆ ಕುತ್ತು ತರುತ್ತಾ ಪ್ರಧಾನಿ ಪಟ್ಟ? ವಿಜಯ್ ಕ್ಯಾಬಿನೆಟ್‌ಗೆ ಕೈಕೊಡಲು ಸಿದ್ಧವಾಯ್ತಾ ಕಾಂಗ್ರೆಸ್?

by Shwetha
September 1, 2026
0

ಚೆನ್ನೈ: ತಮಿಳುನಾಡು ರಾಜಕಾರಣದಲ್ಲಿ ಈಗ 2029ರ ಲೋಕಸಭಾ ಚುನಾವಣೆಯ ಪ್ರಧಾನಿ ಅಭ್ಯರ್ಥಿ ವಿಚಾರವಾಗಿ ದೊಡ್ಡ ಮಟ್ಟದ ಸಂಘರ್ಷ ಶುರುವಾಗಿದೆ. ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮತ್ತು...

ದಿನ ಭವಿಷ್ಯ (12-08-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

ದಿನ ಭವಿಷ್ಯ (01-09-2026) Daily Horoscope ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?

by Shwetha
September 1, 2026
0

ದಿನ ಭವಿಷ್ಯ: 01-09-2026 1 ಮೇಷ ರಾಶಿ ನಿಮ್ಮ ರಾಶ್ಯಾಧಿಪತಿ ಕುಜ ಆಗಿರುವುದರಿಂದ ಈ ದಿನ ನಿಮಗೆ ಅತ್ಯುತ್ಸಾಹದಿಂದ ಕೂಡಿರುತ್ತದೆ. ಉದ್ಯೋಗದಲ್ಲಿ ನಿಮ್ಮ ತ್ವರಿತ ನಿರ್ಧಾರಗಳು ಮೇಲಧಿಕಾರಿಗಳ...

ಭಾರತದಲ್ಲಿ ಮುಸ್ಲಿಮರಿರಬಾರದು ಎಂದು ಬಯಸುವಾತ ಹಿಂದುವೇ ಅಲ್ಲ: ಹಿಂದುತ್ವ ಎಂದರೆ ಎಲ್ಲರನ್ನೂ ಒಳಗೊಳ್ಳುವ ಶಕ್ತಿ-ಅಮೆರಿಕದಲ್ಲಿ ಮೋಹನ್ ಭಾಗವತ್ ಸೌಹಾರ್ದತೆಯ ಮಂತ್ರ

ಭಾರತದಲ್ಲಿ ಮುಸ್ಲಿಮರಿರಬಾರದು ಎಂದು ಬಯಸುವಾತ ಹಿಂದುವೇ ಅಲ್ಲ: ಹಿಂದುತ್ವ ಎಂದರೆ ಎಲ್ಲರನ್ನೂ ಒಳಗೊಳ್ಳುವ ಶಕ್ತಿ-ಅಮೆರಿಕದಲ್ಲಿ ಮೋಹನ್ ಭಾಗವತ್ ಸೌಹಾರ್ದತೆಯ ಮಂತ್ರ

by Shwetha
August 31, 2026
0

ನ್ಯೂಯಾರ್ಕ್: ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕ ಪ್ರವಾಸದ ವೇಳೆ ಹಿಂದುತ್ವ ಮತ್ತು ಮುಸ್ಲಿಮರ ಕುರಿತು ಅತ್ಯಂತ ಮಹತ್ವದ ಹಾಗೂ ಸ್ಫೋಟಕ ಹೇಳಿಕೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram