ನಟ ಪ್ರಭಾಸ್ ಈಗ ಕಲ್ಕಿ ಚಿತ್ರದ ನಂತರ ಗೆಲುವಿನ ಅಲೆಯಲ್ಲಿ ತೇಲುತ್ತಿದ್ದಾರೆ. ಈ ಮಧ್ಯೆ ಪ್ರಭಾಸ್ ಗೆ ಈಗ ತ್ರಿಶಾ ಜೋಡಿಯಾಗಲಿದ್ದಾರೆ ಎಂಬ ಮಾತುಗಳು ಸಿನಿಮಾ ರಂಗದಲ್ಲಿ ಕೇಳಿ ಬರುತ್ತಿವೆ.
ಅನಿಮಲ್ ಚಿತ್ರದ ನಿರ್ದೇಶಕ ಸಂದೀಪ್ ರೆಡ್ಡಿ ವಂಗಾ ಪ್ರಭಾಸ್ ಚಿತ್ರಕ್ಕಾಗಿ ಕ್ಯಾಪ್ ತೊಡಲಿದ್ದಾರೆ ಎನ್ನಲಾಗಿದೆ. ಹೀಗಾಗಿ ಈ ಚಿತ್ರಕ್ಕೆ ಸಂಬಂಧಿಸಿದಂತೆ ತಯಾರಿ ಕೂಡ ನಡೆಯುತ್ತಿದೆ ಎನ್ನಲಾಗಿದೆ. ಈ ಚಿತ್ರಕ್ಕೆ ಈಗ ಸ್ಪಿರಿಟ್ ಎಂದು ಹೆಸರು ಕೂಡ ಇಡಲಾಗಿದೆ. ಪಾತ್ರವರ್ಗದ ಆಯ್ಕೆಯ ಪ್ರಕ್ರಿಯೆ ಕೂಡ ನಡೆಯುತ್ತಿದೆ. ಈ ಮಧ್ಯೆ ನಾಯಕಿಯಾಗಿ ತ್ರಿಶಾ ಬಣ್ಣ ಹಚ್ಚಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಆದರೆ, ಇದು ಪಕ್ಕಾ ಅಲ್ಲ. ಚಿತ್ರರಂಗದಲ್ಲಿ ಹರಿದಾಡುತ್ತಿರುವ ಗಾಸಿಪ್ ಆಗಿದೆ. ನಟಿ ತ್ರಿಶಾ ಕಳೆದ 2 ದಶಕಗಳಿಂದ ನಾಯಕಿಯಾಗಿ ಬಣ್ಣ ಹಚ್ಚುತ್ತಿದ್ದಾರೆ. ಈಗಲೂ ಅವರಿಗೆ ಬೇಡಿಕೆ ಹೆಚ್ಚಿದೆ. ಇತ್ತೀಚೆಗೆ ಸ್ಟಾರ್ ನಟರೊಂದಿಗೆ ತ್ರಿಶಾ ನಟಿಸುತ್ತಿದ್ದಾರೆ. ಈ ಮಧ್ಯೆ ಪ್ರಭಾಸ್ ಗೆ ಜೋಡಿಯಾಗಲಿದ್ದಾರೆ ಎಂಬ ಮಾತುಗಳು ಕೂಡ ಕೇಳಿ ಬಂದಿವೆ.
ಪ್ರಭಾಸ್ ‘ಕಲ್ಕಿ 2898 ಎಡಿ’ ಸಿನಿಮಾದ ನಂತರ ಯಶಸ್ಸಿನ ಶಿಖರ ಏರಿದ್ದಾರೆ. ಹೀಗಾಗಿ ಈಗ ಹೊಸ ಚಿತ್ರಗಳನ್ನು ಒಪ್ಪಿಕೊಳ್ಳಲು ಪ್ರಭಾಸ್ ಮುಂದಾಗಿದ್ದಾರೆ. ‘ದಿ ರಾಜಾ ಸಾಬ್’ ಸಿನಿಮಾದ ಕೆಲಸಗಳು ಬಿರುಸಿನಿಂದ ಸಾಗುತ್ತಿವೆ. ಈ ಮಧ್ಯೆ ಸಂದೀಪ್ ರೆಡ್ಡಿ ವಂಗಾ ಜೊತೆ ಪ್ರಭಾಸ್ ಕೈ ಜೋಡಿಸಲು ಮುಂದಾಗಿದ್ದಾರೆ ಎನ್ನಲಾಗಿದೆ.