ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು (Bengaluru) ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಆಗಸ್ಟ್ 12ರ ವರೆಗೆ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ.
ಕಳೆದ ಹಲವು ದಿನಗಳಿಂದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗಿ ಜನ -ಜೀವನ ಸಂಪೂರ್ಣ ಅಸ್ತವ್ಯಸ್ಥವಾಗುವಂತೆ ಮಾಡಿತ್ತು. ಅಲ್ಲದೇ, ಅಲ್ಲಿ ಗುಡ್ಡು ಕುಸಿದು, ನದಿ ಉಕ್ಕಿ ಹರಿದು ಜನರಿಗೆ ತೊಂದರೆ ಮಾಡಿದ್ದವು. ಸದ್ಯ ಕರಾವಳಿ ಜಿಲ್ಲೆಗಳಲ್ಲಿ (Karavali Districts) ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಕೆ ಮುನ್ಸೂಚನೆ ತಿಳಿಸಿದೆ.
ಅಲ್ಲದೇ ಉತ್ತರ ಮತ್ತು ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಚದುರಿದಂತೆ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್ ಪಾಟೀಲ್ ಹೇಳಿದ್ದಾರೆ. ರಾಜ್ಯದಲ್ಲಿ ಸದ್ಯದ ಹವಮಾನದ ಸ್ಥಿತಿ ಗಮನಿಸಿದರೆ, ಮಳೆ ನಿಲ್ಲುವ ಲಕ್ಷಣ ಇಲ್ಲ. ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಲ್ಲಿಯೂ ಉತ್ತಮ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕಳೆದ ಜುಲೈ ತಿಂಗಳಲ್ಲಿ ಆರ್ದ್ರತೆ ಮತ್ತು ಶಾಖ ಎದುರಿಸುತ್ತಿದ್ದ ಜನರು ಮುಂದಿನ ದಿನಗಳಲ್ಲಿ ಭಾರೀ ಮಳೆ ಎದುರಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ.
ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಲ್ಲಿಯೂ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಒಂದು ವೇಳೆ ನಿರೀಕ್ಷೆಗೂ ಮೀರಿ ಮಳೆ ಬಂದರೆ ಅವಾಂತರಗಳೂ ಸಂಭವಿಸುವ ಸಾಧ್ಯತೆಗಳಿವೆ. ಹೀಗಾಗಿ ಜನರು ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ.