ಬೆಳಗಾವಿ: ಕಲುಷಿತ ಬೋರವೆಲ್ ನೀರು ಸವಿಸಿ 41 ಜನರು ಅಸ್ವಸ್ಥರಾಗಿರುವ ಘಟನೆ ನಡೆದಿದೆ.
ಈ ಘಟನೆ ಸವದತ್ತಿ ತಾಲ್ಲೂಕಿನ ಚಚಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕಳೆದ ಒಂದು ವಾರದಿಂದ ಗ್ರಾಮದಲ್ಲಿ ವಾಂತಿ – ಭೇದಿ ಹೆಚ್ಚಾಗಿದೆ. ಒಂದೇ ದಿನ 41 ಮಂದಿಗೆ ವಾಂತಿ-ಭೇದಿ ಕಾಣಿಸಿಕೊಂಡಿದೆ. ತೀವ್ರ ಅಸ್ವಸ್ಥರಾದ ಮೂವರನ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ (Belagavi District Hospital) ದಾಖಲಿಸಲಾಗಿದೆ.
ಈರವ್ವ ಗಾಳಿಮಠ (63) ಅವರನ್ನು ಜಿಲ್ಲಾಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ (ICU) ಸೇರಿಸಲಾಗಿದೆ. ಚಚಡಿ ಹಾಗೂ ಇಂಚಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ (Health Center) ಒಳರೋಗಿಗಳಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಲುಷಿತ ನೀರು (Contaminated Water) ಸೇವನೆಯಿಂದ ವಾಂತಿ ಭೇದಿ ಕಾಣಿಸಿಕೊಂಡಿದೆ. ಆದರೆ, ಯಾರಿಗೂ ಪ್ರಾಣಾಪಾಯವಾಗಿಲ್ಲ. ಗ್ರಾಮದಲ್ಲಿ ನಾಲ್ವರು ವೈದ್ಯರು ಹಾಗೂ ಹಲವು ವೈದ್ಯಕೀಯ ಸಿಬ್ಬಂದಿ ಸ್ಥಳದಲ್ಲೇ ಬಿಡು ಬಿಟ್ಟಿದ್ದಾರೆ.
ಪ್ರತಿಕ್ರಿಯೆ ನೀಡಿರುವ ಅಧಿಕಾರಿಗಳು, ಟ್ಯಾಂಕನ್ನು ಸಂಪೂರ್ಣ ಖಾಲಿ ಮಾಡಿ, ಒಣಗಿಸಿ ಮತ್ತೆ ನೀರು ಭರ್ತಿ ಮಾಡಲಾಗುವುದು. ಆ ನೀರನ್ನು ಕೂಡ ನಳಗಳ ಮೂಲಕ ಹರಿಬಿಟ್ಟು ಮತ್ತೆ ಟ್ಯಾಂಕ್ ಖಾಲಿ ಮಾಡಲಾಗುವುದು. ಇದರಿಂದ ಟ್ಯಾಂಕ್ ಅಥವಾ ನಳಗಳಲ್ಲಿ ಎಲ್ಲಿಯೇ ಮಲಿನ ನೀರು ಸೇರಿಕೊಂಡಿದ್ದರೂ ಸ್ವಚ್ಛವಾಗುತ್ತದೆ ಎಂದು ಹೇಳಿದ್ದಾರೆ.