ಬೆಂಗಳೂರು: ಮಾಜಿ ಶಾಸಕಿ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಪುತ್ರಿ ಸೌಮ್ಯ ರೆಡ್ಡಿ ಅರವನ್ನು ನೂತನ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಕಾಂಗ್ರೆಸ್ ಹೈಕಮಾಂಡ್ ನೇಮಕ ಮಾಡಿ ಆದೇಶ ಹೊರಡಿಸಿದೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರನ್ನು ಸೌಮ್ಯ ರೆಡ್ಡಿ ಅವರನ್ನು ಮಹಿಳಾ ಅಧ್ಯಕ್ಷರನ್ನಾಗಿ ಮಾಡಿ ಆದೇಶ ಹೊರಡಿಸಿದ್ದಾರೆ. ಕರ್ನಾಟಕದ ಜೊತೆಗೆ ಚಂಢೀಗಡ ಮತ್ತು ಅರುಣಾಚಲ ಪ್ರದೇಶ ಮಹಿಳಾ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ.
ಸೌಮ್ಯ ರೆಡ್ಡಿ ಬೆಂಗಳೂರಿನ ಜಯನಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿಯಾಗಿದ್ದರು. ಅಲ್ಲದೇ, ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಕಂಡಿದ್ದರು. ಇದಕ್ಕೂ ಮುನ್ನ ನಡೆದಿದ್ದ ವಿಧಾನಸಭಾ ಚುನಾವಣೆಯಲ್ಲಿ ಕೂಡ ಅಲ್ಪ ಮತಗಳ ಅಂತರದಿಂದ ಸೋಲು ಕಂಡಿದ್ದರು. ಪುಷ್ಪಾ ಅಮರನಾಥ್ ಅವರು ರಾಜ್ಯ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆಯಾಗಿದ್ದರು. ಈಗ ಅವರ ಸ್ಥಾನಕ್ಕೆ ಸೌಮ್ಯ ಆಯ್ಕೆಯಾಗಿದ್ದಾರೆ.