ಬೆಂಗಳೂರು: ಸಿಲಿಕಾನ್ ಸಿಟಿಯ (Bengaluru Rain) ರಾಜಕಾಲುವೆ ಒತ್ತುವರಿ ತೆರವುಗೊಳಿಸುವಂತೆ ಅಧಿಕಾರಿಗಳು ಖಡಕ್ ಎಚ್ಚರಿಕೆ ನೀಡಿದ್ದಾರೆ.
ಕುರಿತು ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ ಸಿಎಂ ಸಿದ್ದರಾಮಯ್ಯ (Siddaramaiah)ಅವರು, ದೊಡ್ಡ ಚರಂಡಿಗಳು ಓಪನ್ ಇರುವ ಸ್ಥಳಗಳನ್ನು ಗುರುತಿಸಿ ಮೊದಲೇ ಬಂದೋಬಸ್ತ್ ಮಾಡಲಾಗಿದೆ. ಹೀಗಾಗಿ ಯಾವುದೇ ಸಾವು- ನೋವು ಸಂಭವಿಸಿಲ್ಲ. ರಾಜಕಾಲುವೆಗಳ ಒತ್ತುವರಿ ತೆರವು ಮಾಡಬೇಕು. ಜೊತೆಗೆ ಕೋಡಿಗೆ ಗೇಟ್ ಅಳವಡಿಸುವ ಮೂಲಕ ಮಳೆಗಾಲದಲ್ಲಿ ಕೆರೆಗಳಲ್ಲಿ ನೀರಿನ ಪ್ರಮಾಣ ನಿಯಂತ್ರಿಸಿ ಪ್ರವಾಹ ತಡೆಗಟ್ಟಲು ಸೂಚಿಸಿದರು.
ಅಧಿಕಾರಿಗಳು ಕಟ್ಟೆಚ್ಚರ ವಹಿಸಬೇಕು, ಪ್ರತಿದಿನ ವಲಯ ಆಯುಕ್ತರ ಸಭೆ ನಡೆಸಿ, ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಹಾಗೂ ಎಂಜಿನಿಯರ್ಗಳಿಗೆ ಜವಾಬ್ದಾರಿ ನಿಗದಿ ಪಡಿಸಿ. ಕರ್ತವ್ಯಲೋಪ ಎಸಗಿದರೆ, ಮುಲಾಜಿಲ್ಲದೆ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಎಚ್ಚರಿಕೆ ನೀಡಿದರು.
ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ತಮ್ಮ ಅಧೀನದಲ್ಲಿರುವ ಅಧಿಕಾರಿಗಳು ಎಚ್ಚರಿಕೆಯಿಂದ ಇರಬೇಕು. ನಗರ ಮತ್ತು ಪಟ್ಟಣಗಳಲ್ಲಿ ಕಾಲುವೆಗಳಲ್ಲಿ ಮಳೆ ನೀರು ಸರಾಗವಾಗಿ ಹರಿದು ಹೋಗುವಂತೆ ಕ್ರಮ ಕೈಗೊಳ್ಳಬೇಕು. 210 ಕೋಟಿ ರೂಪಾಯಿಯನ್ನು ರಾಜ್ಯ ಹೆದ್ದಾರಿಗಳ ದುರಸ್ತಿಗೆ ಈಗಾಗಲೇ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ಪ್ರವಾಹದ ವೇಳೆ ಸಾಂಕ್ರಾಮಿಕ ಕಾಯಿಲೆಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸಬೇಕು. ಈಗಾಗಲೇ ಡೆಂಗ್ಯು ಪ್ರಕರಣಗಳಲ್ಲಿ ಇಳಿಕೆಯಾಗಿದೆ. ಚಿಕುನ್‌ಗುನ್ಯಾ, ಮಲೇರಿಯಾ ರೋಗ ಹರಡದಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಎಚ್ಚರಿಕೆ ವಹಿಸಿ ಎಂದರು.








