ಬೆಳಗಾವಿ: ಯೋಧರೊಬ್ಬರು ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ನಡೆದಿದೆ.
ಬೈಕ್ ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಹೃದಯಾಘಾತವಾಗಿ ಯೋಧ ಸಾವನ್ನಪ್ಪಿದ್ದಾರೆ. ಈ ಘಟನೆ ನಗರದ ಎಂಎಲ್ ಐಆರ್ ಸಿ ಕ್ಯಾಂಪ್ ನಲ್ಲಿ ನಡೆದಿದೆ.
ಸುನೀಲ್ ಸಲಾಂ (37) ಹೃದಯಾಘಾತಕ್ಕೆ ಬಲಿಯಾಗಿರುವ ಯೋಧ. ಯೋಧ ಮರಾಠ ಲಘು ಪದಾತಿದಳಲ್ಲಿ ಹವಾಲ್ದಾರ್ ಆಗಿ ಕೆಲಸ ಮಾಡುತ್ತಿದ್ದರು. ಬೈಕ್ ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಅವರಿಗೆ ಹೃದಯಾಘಾತವಾಗಿದೆ. ಹೀಗಾಗಿ ಅವರು ಬೈಕ್ ನಿಂದ ಕೆಳಗೆ ಬಿದ್ದಿದ್ದಾರೆ.
ಯೋಧ ಹೃದಯಾಘಾತಕ್ಕೆ ಬಲಿಯಾಗಿರುವ ಕೊನೆಯ ಕ್ಷಣಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಹಾರಾಷ್ಟ್ರದ ಚಂದಗಡ ತಾಲೂಕಿನ ಘುಳೇವಾಡಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದು ಬಂದಿದೆ.








