ಮಂಗಳೂರು: ಬಾಂಗ್ಲಾದೇಶದ ಪ್ರಧಾನಿಗೆ ಬಂದ ಸ್ಥಿತಿ ರಾಜ್ಯದ ರಾಜ್ಯಪಾಲರಿಗೂ ಬರಬಹುದು ಎಂದು ವಿಪ ಸದಸ್ಯ ಐವನ್ ಡಿಸೋಜ ಹೇಳಿದ್ದಾರೆ.
ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ರಾಜ್ಯಪಾಲರ ವಿರುದ್ಧ ಮಂಗಳೂರಿನ ಲಾಲ್ ಬಾಗ್ ವೃತ್ತದಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ಈ ಸಂದರ್ಭದಲ್ಲಿ ರಾಜ್ಯಪಾಲರು ಹಾಗೂ ದೋಸ್ತಿ ಪಾರ್ಟಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಐವನ್ ಡಿಸೋಜ, ರಾಜ್ಯಪಾಲರನ್ನು ಕೇಂದ್ರ ಸರ್ಕಾರ ಮರಳಿ ಕರೆಯಿಸಿಕೊಳ್ಳದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು. ಬಾಂಗ್ಲಾ ಪ್ರಧಾನಿಗೆ ಬಂದ ಸ್ಥಿತಿ ರಾಜ್ಯಪಾಲರಿಗೂ ಬರಬಹುದು. ರಾಜ್ಯಪಾಲರನ್ನು ಕಿತ್ತು ಹಾಕಲು ಬಾಂಗ್ಲಾ ಸ್ಥಿತಿ ಬರಬಹುದು ಎಂದು ಅಸಮಾಧಾನ ಹೊರಹಾಕಿದ್ದಾರೆ.
ಪ್ರತಿಭಟನೆ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬಸ್ಸಿಗೆ ಕಲ್ಲು ತೂರಾಟ ನಡೆಸಿದ್ದಾರೆ. ರಸ್ತೆಯಲ್ಲಿ ಟೈರ್ ಗೆ ಬೆಂಕಿ ಹಚ್ಚಿ ರಾಜ್ಯಪಾಲರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.








