ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಅವಘಡವೊಂದು ನಡೆದಿದೆ. ಘಟನೆಯಲ್ಲಿ ಚಾಲಕ ಸಾವನ್ನಪ್ಪಿದ್ದಾರೆ.
ಈ ಕಾರನ್ನು ಕಾರಿನ ಮಾಲೀಕರೆ ಚಲಾಯಿಸಿಕೊಂಡು ಹೋಗುತ್ತಿದ್ದರು. ವೇಗವಾಗಿ ಕಾರು ಚಾಲನೆ ಮಾಡಿಕೊಂಡು ಬರುತ್ತಿದ್ದ ಸಂದರ್ಭದಲ್ಲಿ ಪಲ್ಟಿಯಾಗಿ ಸಾವನ್ನಪ್ಪಿದ್ದಾರೆ. ಈ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಸಂಪಾಜೆ ಗ್ರಾಮದ ದೊಡ್ಡಡ್ಕ ಹತ್ತಿರ ನಡೆದಿದೆ.
ಕೊಡಗು (Kodagu) ಖಾಸಗಿ ಬಸ್ ಕಾರ್ಮಿಕರ ಸಂಘದ ಗೌರವ ಅಧ್ಯಕ್ಷರಾಗಿದ್ದ ಗಣೇಶ್ (64) ಸಾವನ್ನಪ್ಪಿದ ದುರ್ದೈವಿ. ಗಣೇಶ್ ತಮ್ಮ ಪುತ್ರನನ್ನು ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಬಿಟ್ಟು ಮರಳಿ ಬರುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ. ಘಟನೆಯಲ್ಲಿ ಗಣೇಶ್ ಎದೆ ಭಾಗಕ್ಕೆ ಗಂಭೀರ ಗಾಯವಾಗಿತ್ತು. ಕೂಡಲೇ ಅವರನ್ನು ಸುಳ್ಯದ (Sullia) ಕೆವಿಜಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಕಾರಿನಲ್ಲಿದ್ದ ಗಣೇಶ್ ಅವರ ಪುತ್ರಿ, ಅಳಿಯ ಮತ್ತು ಮರ್ತೋವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಕುರಿತು ಮಡಿಕೇರಿ (Madikeri) ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.