ಚಂದನವನದ ಲಂಗೋಟಿ ಮ್ಯಾನ್(Langoti Man Film) ಚಿತ್ರಕ್ಕೆ ಪುರೋಹಿತರಿಂದ ಭಾರೀ ವಿರೋಧ ವ್ಯಕ್ತವಾಗುತ್ತಿದೆ.
ಸಂಜೋತ ಭಂಡಾರಿ ನಿರ್ದೇಶನದ ‘ಲಂಗೋಟಿ ಮ್ಯಾನ್’ ಚಿತ್ರಕ್ಕೆ ಸದ್ಯ ಅಖಿಲ ಕರ್ನಾಟಕ ಅರ್ಚಕರ ಹಾಗೂ ಪುರೋಹಿತರ ಪರಿಷತ್ ಆಕ್ಷೇಪ ವ್ಯಕ್ತಪಡಿಸಿದೆ. ನಮ್ಮ ಸಮುದಾಯದ ಕುರಿತು ಅಪಹಾಸ್ಯ ಮಾಡುವುದು ತಪ್ಪು ಎಂದು ಪುರೋಹಿತರ ಪರಿಷತ್ ಕಾರ್ಯಾಧ್ಯಕ್ಷ ರಾಘವೇಂದ್ರ ಭಟ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ರೀತಿ ಒಂದು ಸಮುದಾಯವನ್ನು ಟಾರ್ಗೆಟ್ ಮಾಡಿ ಚಿತ್ರ ನಿರ್ಮಿಸುವುದು ತಪ್ಪು. ಈ ಚಿತ್ರವನ್ನು ಬ್ಯಾನ್ (Ban) ಮಾಡಬೇಕು. ಮಾಡದಿದ್ದರೆ ಪ್ರತಿಭಟನೆ ನಡೆಸುತ್ತೇವೆ. ಲಂಗೋಟಿ, ಜನಿವಾರ ಇವು ಸನಾತನ ಸಂಸ್ಕೃತಿಯ ಪ್ರತೀಕ. ಇದು ನಮ್ಮ ಸಮುದಾಯದ ಸಂಕೇತ. ಈ ಕುರಿತು ಅಪಹಾಸ್ಯ ಮಾಡುವುದು ಸರಿಯಲ್ಲ. ಇತ್ತೀಚೆಗೆ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಎಲ್ಲರ ಶ್ರೇಯೋಭಿವೃದ್ದಿಗೆ ಪೂಜೆ ಮಾಡಿದ್ದಾರೆ. ಇಂದು ನಮ್ಮನ್ನೇ ಅಪಹಾಸ್ಯ ಮಾಡುತ್ತಿದ್ದಾರೆ. ಇದನ್ನು ಸಹಿಸುವ ಪ್ರಶ್ನೆ ಇಲ್ಲವೇ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಮ್ಮ ವಿರೋಧದ ಮಧ್ಯೆಯೂ ಈ ಚಿತ್ರವನ್ನು ಬಿಡುಗಡೆ ಮಾಡಿದರೆ, ರಾಜ್ಯಾದ್ಯಂತ ಅರ್ಚಕರ ಪರಿಷತ್ ನಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.








