ಚಿಕ್ಕೋಡಿ: 10 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿರುವ ಪೈಶಾಚಿಕ ಕೃತ್ಯವೊಂದು ಬೆಳಕಿಗೆ ಬಂದಿದೆ.
ಪಕ್ಕದ ಮಹಾರಾಷ್ಟ್ರದಲ್ಲಿ ಬೆಳಕಿಗೆ ಬಂದಿದೆ. ಬೆಳಗಾವಿಗೆ ಸಮೀಪದಲ್ಲಿರುವ ಮಹಾರಾಷ್ಟ್ರದ (Maharashtra) ಕೊಲ್ಲಾಪುರ ಹೊರವಲಯದ ಶೇಯೇ ಪ್ರದೇಶದಲ್ಲಿ ಘಟನೆ ನಡೆದಿದೆ. ಅತ್ಯಾಚಾರಕ್ಕೆ ವಿರೋಧಿಸಿದ್ದಕ್ಕೆ ಬಾಲಿಕಯನ್ನೇ ಪಾಪಿ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.
ಬಾಲಕಿಯ ತಾಯಿಯ ಸಂಬಂಧಿಯಿಂದಲೇ ಈ ಕೃತ್ಯ ನಡೆದಿದೆ ಎನ್ನಲಾಗಿದೆ. ಕಳೆದ 3 ತಿಂಗಳಿನಿಂದ ಸಂಬಂಧಿಕರ ಮನೆಯಲ್ಲಿ ವಾಸವಿದ್ದ ಕಾಮುಕ, ಮೃತ ಬಾಲಕಿಯ ಮನೆಯಿಂದ ಕೆಲವೇ ಅಂತರದಲ್ಲಿರುವ ಹೊಲದಲ್ಲಿ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಅರೆಬೆತ್ತಲೆ ಸ್ಥಿತಿಯಲ್ಲಿ ಬಿದ್ದಿದ್ದ ಬಾಲಕಿ ಶವ ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಪ್ರಕರಣ ನಡೆದು ಐದೇ ಗಂಟೆಗಳಲ್ಲಿ ಆರೋಪಿಯನ್ನು ಕೊಲ್ಲಾಪುರ ಪೊಲೀಸರು (Kollapur Police) ಬಂಧಿಸಿದ್ದಾರೆ. ದಿನೇಶ್ ಆರೋಪಿ ಎನ್ನಲಾಗಿದೆ.
ಪೊಲೀಸರ ಎದುರು ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ. ಆರೋಪಿ ಹಾಗೂ ಅಪ್ರಾಪ್ತೆಯ ಪೋಷಕರು ಬಿಹಾರ ಮೂಲದವರು ಎನ್ನಲಾಗಿದೆ. ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.