ಬೆಂಗಳೂರು: ಅಪ್ರಾಪ್ತ ಮಕ್ಕಳನ್ನು ಕೊಲೆ ಮಾಡಿದ್ದ ಮಲತಂದೆಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಬೆಂಗಳೂರಿನ ಅಮೃತಹಳ್ಳಿಯ ದಾಸರಹಳ್ಳಿಯಲ್ಲಿ (Amruthahalli Dasarahalli) ಇಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳನ್ನು ಮಲತಂದೆಯೇ ಕೊಲೆ ಮಾಡಿ ಪರಾರಿಯಾಗಿದ್ದ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಂತಕನನ್ನು ಅಮೃತಹಳ್ಳಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಸಮಿತ್ ಬಂಧಿತ ಆರೋಪಿ. ಆರೋಪಿಯು ಕೊಲೆ ಮಾಡಿದ ನಂತರ ಬಟ್ಟೆ ಬದಲಿಸಿಕೊಂಡು ಮನೆಯಿಂದ ಹೊರಗಡೆ ಹೋಗಿದ್ದ. ಘಟನೆ ನಡೆದ 48 ಗಂಟೆ ಒಳಗಾಗಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಮಲತಂದೆ ಸಮಿತ್ ಗೆ ಕೊಲೆಯಾದವರು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದರಿಂದಾಗಿ (Daughters) ಕೋಪದಲ್ಲಿ ಕೊಲೆ ಮಾಡಿದ್ದಾನೆ ಎಂಬುವುದು ಪ್ರಾಥಮಿಕ ತನಿಖೆಯಿಂದ ಬಹಿರಂಗವಾಗಿದೆ.
ಆರೋಪಿ ಸಮಿತ್ ಮಕ್ಕಳ ಮೇಲೆ ಸಾಕಷ್ಟು ಅನುಮಾನ ಪಡುತ್ತಿದ್ದ. ಮಗಳ ಸ್ನೇಹಿತ ಯಾರಾದರೂ ಮನೆಗೆ ಬಂದಿರಬಹುದು ಎಂಬ ಅನುಮಾನದ ಮೇಲೆ ಆರೋಪಿ ಸಮಿತ್ ಮನೆಗೆ ತೆರಳಿದ್ದ. ಹತ್ಯೆಯ ದಿನ ಸಮಿತ್ ಸೃಷ್ಠಿ ಮತ್ತು ಸೋನಿಯಾಯರನ್ನು ಶಾಲೆಯಿಂದ ಕರೆದುಕೊಂಡು ಬಂದಿದ್ದ. ಆಗ ಮಗಳು ರೂಂ ಸೇರಿಕೊಂಡು ಮೊಬೈಲ್ ನಲ್ಲಿ ಮಾತನಾಡುತ್ತಿದ್ದಳು ಎನ್ನಲಾಗಿದೆ. ಮಗಳ ರೂಂ ಬಳಿ ಬಂದು ಮಾತನಾಡುತಿದ್ದುದ್ದನ್ನು ಸಮಿತ್ ಕೇಳಿಸಿಕೊಂಡಿದ್ದಾನೆ. ಆತ ರೂಮ್ ಒಳಗೆ ಬರುತ್ತಿದ್ದಂತೆ ಆಕೆ ಮೊಬೈಲ್ ನ್ನು ದಿಂಬಿನ ಕೆಳಗೆ ಮುಚ್ಚಿಟ್ಟಿದ್ದಾಳೆ. ಆಗ ಸಿಟ್ಟಿನಲ್ಲಿ ಕೊಲೆ ಮಾಡಿದ್ದಾನೆ. ಚಿಕ್ಕ ಮಗಳು ಹೊರಗಡೆ ಬಂದ ಕೂಡಲೇ ಅಕ್ಕನ ಬಗ್ಗೆ ಹೇಳಿದ್ದಾನೆ.
ಆನಂತರ ಊಟ ತರಲು ಹೇಳಿ, ಚಿಕ್ಕಮಗಳನ್ನೂ ಹತ್ಯೆ ಮಾಡಿದ್ದಾನೆ. ಆನಂತರ ಅಲ್ಲಿಂದ ಪರಾರಿಯಾಗಿದ್ದಾನೆ. ಈ ಕುರಿತು ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಆರೋಪಿ ಬಂಧಿಸಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.








