ದಾವಣಗೆರೆ : ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1 ಸಾವಿರದ ಗಡಿ ದಾಟುತ್ತಿದ್ದು, ಜನರು ಆತಂಕಗೊಂಡಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಮತ್ತೊಮ್ಮೆ ಲಾಕ್ ಡೌನ್ ಘೋಷಣೆ ಮಾಡಲಾಗುತ್ತದೆ ಎಂಬ ಚರ್ಚೆ ಎಲ್ಲೆಡೆ ನಡೆಯುತ್ತಿದೆ.
ಇದರ ಮಧ್ಯೆ ಲಾಕ್ ಡೌನ್ ಬಗ್ಗೆ ದಾವಣಗೆರೆಯಲ್ಲಿ ಶ್ರೀ ರಾಮುಲು ಅವರು ಪ್ರತಿಕ್ರಿಯೆ ನೀಡಿದ್ದು, ರಾಜ್ಯದಲ್ಲಿ ಮತ್ತೊಮ್ಮೆ ಲಾಕ್ ಡೌನ್ ಮಾಡುವ ಬಗ್ಗೆ ಸುಳಿವು ನೀಡಿದ್ದಾರೆ. “ಯಾವ ಜಿಲ್ಲೆಗಳಲ್ಲಿ ಕೊರೊನಾ ಪ್ರಕರಣಗಳು ಜಾಸ್ತಿ ಇವೆಯೋ ಅಂತಹ ಜಿಲ್ಲೆಗಳಲ್ಲಿ ಮತ್ತೆ ಲಾಕ್ ಡೌನ್ ಮಾಡುತ್ತೇವೆ” ಎಂದು ಆರೋಗ್ಯ ಸಚಿವ ಬಿ. ಶ್ರೀ ರಾಮುಲು ಹೇಳಿದ್ದಾರೆ.
ಇನ್ನು ಜುಲೈ 6ರ ನಂತರ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಜಾರಿಯಾಗಲಿದೆ ಎಂದು ಹೇಳಲಾಗುತ್ತಿತ್ತು. ಆದರೆ ರಾಜ್ಯ ಸರ್ಕಾರ ಇದುವರೆಗೂ ಅಧಿಕೃತವಾಗಿ ಲಾಕ್ ಡೌನ್ ಬಗ್ಗೆ ಹೇಳಿರಲಿಲ್ಲ. ಆದ್ರೆ ಕಂದಾಯ ಸಚಿವರು, ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಇದೆ. ಪರೀಕ್ಷೆ ಮುಗಿದ ಬಳಿಕ ರಾಜ್ಯದಲ್ಲಿ ಲಾಕ್ ಡೌನ್ ಜಾರಿ ಬಗ್ಗೆ ನಿರ್ಧರಿಸಲಾಗುತ್ತದೆ ಎಂದು ಈ ಹಿಂದೆ ಹೇಳಿದ್ದರು. ಇದೀಗ ಶ್ರೀರಾಮುಲು ಅವರು ಮತ್ತೆ ಲಾಕ್ ಡೌನ್ ಮಾಡುವ ಬಗ್ಗೆ ಸುಳಿವು ನೀಡಿದ್ದಾರೆ.