ಅರ್ಬತ್: ಸುಡಾನ್ ನಲ್ಲಿ (Sudan) ವ್ಯಾಪಕ ಬಳೆಗೆ ಸುಮಾರು 60 ಜನ ಬಲಿಯಾಗಿ, ಹಲವಾರು ಜನರು ಕಾಣೆಯಾಗಿರುವ ಘಟನೆ ನಡೆದಿದೆ.
ಮಳೆಯಿಂದಾಗಿ ಅಣೆಕಟ್ಟು (Dam Burst) ಒಡೆದು ಕನಿಷ್ಠ 60 ಜನರು ಸಾವನ್ನಪ್ಪಿದ್ದು, ಹಲವು ಮಂದಿ ನಾಪತ್ತೆಯಾಗಿದ್ದಾರೆ. ಧಾರಾಕಾರ ಮಳೆಯಿಂದಾಗಿ ಕೆಂಪು ಸಮುದ್ರದ ಸಮೀಪದಲ್ಲಿದ್ದ ಅರ್ಬತ್ ಅಣೆಕಟ್ಟು (Arbaat Dam) ಕೊಚ್ಚಿ ಹೋಗಿದೆ. ನೀರು ಸುಮಾರು 20 ಹಳ್ಳಿಗಳಿಗೆ ನುಗ್ಗಿದ್ದು 50 ಸಾವಿರ ಮನೆಗಳು ಕೊಚ್ಚಿ ಹೋಗಿವೆ ಎಂದು ವರದಿಯಾಗಿದೆ.
ಅರ್ಬತ್ ಅಣೆಕಟ್ಟು 25 ಮಿಲಿಯನ್ ಕ್ಯೂಬಿಕ್ ಮೀಟರ್ ಸಾಮರ್ಥ್ಯ ಹೊಂದಿತ್ತು. ಸದ್ಯ ನೀರು ಕೊಚ್ಚಿ ಹೋಗಿರುವ ಪ್ರದೇಶದ ಗುರುತು ಸಿಗುತ್ತಿಲ್ಲ. ನೆರೆಗೆ ವಿದ್ಯುತ್ ಕಂಬ ಮತ್ತು ನೀರಿನ ಪೈಪ್ಗಳು ನಾಶವಾಗಿವೆ. ಚಿನ್ನದ ಗಣಿಯಲ್ಲಿ ಕೆಲಸ ಮಾಡುತ್ತಿದ್ದ 150 ರಿಂದ 200 ಮಂದಿ ಕಾಣೆಯಾಗಿದ್ದಾರೆ. 2023 ರಿಂದ ಸೇನೆ ಮತ್ತು ಅರೆಸೇನಾ ಪಡೆಗಳ ನಡುವಣ ಸಂಘರ್ಷದಿಂದ ಸುಡಾನ್ ಈಗಾಗಲೇ ತತ್ತರಿಸಿ ಹೋಗಿದೆ. ಈಗ ಭಾರೀ ಮಳೆಯಿಂದಾಗಿ ಮತ್ತೊಂದು ಸಂಕಷ್ಟಕ್ಕೆ ಸಿಲುಕಿದೆ. ಈ ವರ್ಷ ದೇಶಾದ್ಯಂತ ಪ್ರವಾಹದಲ್ಲಿ 132 ಜನರು ಸಾವನ್ನಪ್ಪಿದ್ದಾರೆ, 118,000 ಜನರು ಸ್ಥಳಾಂತರಗೊಂಡಿದ್ದಾರೆ ಎಂದು ಅಲ್ಲಿನ ಸರ್ಕಾರ ಹೇಳಿದೆ.








