ಬೆಂಗಳೂರು/ Bengaluru : ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ಪ್ರಾಸಿಕ್ಯೂಷನ್ (Prosecution) ಗೆ ಅನುಮತಿ ನೀಡಿರುವುದನ್ನು ರದ್ದು ಕೋರಿ ಸಲ್ಲಿಸಿದ್ದ (Writ Petition) ರಿಟ್ ಅರ್ಜಿಯ ವಿಚಾರಣೆ ನಾಳೆ ಹೈಕೋರ್ಟ್‌ನಲ್ಲಿ (High Court) ವಿಚಾರಣೆಗೆ ಬರಲಿದೆ.
ನ್ಯಾ.ನಾಗಪ್ರಸನ್ನ (Justice Naga Prasanna) ಅವರ ಪೀಠದಲ್ಲಿ ಈ ಪ್ರಕರಣದ ವಿಚಾರಣೆ ನಡೆಯಲಿದೆ. ಹೀಗಾಗಿ ಇಡೀ ರಾಜ್ಯದ ಚಿತ್ತ ಹೈಕೋರ್ಟ್‌ನತ್ತ ನೆಟ್ಟಿದೆ. ಸಿಎಂ ಸಿದ್ದರಾಮಯ್ಯ ಪರ ಹಿರಿಯ ನ್ಯಾಯವಾದಿ ಅಭಿಷೇಕ್ ಮನುಸಿಂಘ್ವಿ, ರಾಜ್ಯಪಾಲರ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ನಡೆಸಲಿದ್ದಾರೆ.
ಏ.19ರ ವಿಚಾರಣೆ ವೇಳೆ, ಆ.29 ರವರೆಗೂ ಸಿದ್ದರಾಮಯ್ಯ ವಿರುದ್ಧ ಯಾವುದೇ ಕ್ರಮಕ್ಕೆ ಸೂಚಿಸದಂತೆ ಕೆಳಹಂತದ ನ್ಯಾಯಾಲಯಕ್ಕೆ ಹೈಕೋರ್ಟ್ ಸೂಚಿಸಿತ್ತು. ಹೀಗಾಗಿ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿತ್ತು. ಹೀಗಾಗಿ ನಾಳೆ ಕೋರ್ಟ್ ನ ಮುಂದಿನ ನಡೆ ಭಾರೀ ಕುತೂಹಲಕ್ಕೆ ದಾರಿ ಮಾಡಿಕೊಟ್ಟಿದೆ.
ಕೋರ್ಟ್ ತೀರ್ಪಿನ ಮೇಲೆ ಮುಂದಿನ ರಾಜಕೀಯ ಹಾಗೂ ಕಾನೂನು ಆಗುಹೋಗುಗಳು ನಿರ್ಧಾರವಾಗಲಿವೆ. ಅಲ್ಲದೇ, ಡಿಕೆ ಶಿವಕುಮಾರ್ ಪ್ರಕರಣದಲ್ಲಿ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ವಾಪಸ್ ಪ್ರಶ್ನಿಸಿ ಸಿಬಿಐ, ಯತ್ನಾಳ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಗಿಸಿರುವ ಹೈಕೋರ್ಟ್, ನಾಳೆಯೇ ಆದೇಶ ನೀಡಲಿದೆ.








