ಗಾಂಧಿನಗರ: ತಂದೆಯ ಆಪ್ತ ಸ್ನೇಹಿತನೊಬ್ಬ ಮೂರು ವರ್ಷದ ಮಗುವಿನ ಮೇಲೆಯೇ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ.
ಗುಜರಾತ್‌ನ (Gujarat) ವಲ್ಸಾದ್‌ನ ಉಮರ್ಗಾಮ್ (Umargam) ಪ್ರದೇಶದಲ್ಲಿ ಈ ಅಮಾನವೀಯ ಘಟನೆ ನಡೆದಿದೆ. ಘಟನೆಯ ನಂತರ ಕಾಮುಕ ಆರೋಪಿ ಪರಾರಿಯಾಗಿದ್ದಾನೆ. ಲೈಂಗಿಕ ದೌರ್ಜನ್ಯದ ಸುದ್ದಿ ಹರಡುತ್ತಿದ್ದಂತೆ, ರೊಚ್ಚಿಗೆದ್ದ ಸ್ಥಳೀಯ ನಿವಾಸಿಗಳು ಉಮರ್ಗಾಮ್ ಪೊಲೀಸ್ ಠಾಣೆಗೆ (Umargam Police Station) ಮುತ್ತಿಗೆ ಹಾಕಿ ಆಕ್ರೋಶ ಹೊರ ಹಾಕಿದ್ದಾರೆ. ಆರೋಪಿಯನ್ನ ಬಂಧಿಸಿ, ಕೂಡಲೇ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಮಧ್ಯಾಹ್ನದ ವೇಳೆಗೆ ಬಂಧಿಸುವುದಾಗಿ ಪೊಲೀಸರು ಭರವಸೆ ನೀಡಿದರೂ ಜನ ಮಾತ್ರ ಶೀಘ್ರ ನ್ಯಾಯ ದೊರಕಿಸಿಕೊಡುವಂತೆ ಹಾಗೂ ಕಾಮುಕನಿಗೆ ಮರಣದಂಡನೆ ವಿಧಿಸುವಂತೆ ಪಟ್ಟು ಹಿಡಿದರು. ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗುತ್ತಿದ್ದಂತೆ ಪೊಲೀಸರು ಉಮರ್ಗಾಮ್‌ನಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.
ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದಾರೆ. ಜೊತೆಗೆ ಶಾಂತಿ ಸುವ್ಯವಸ್ಥೆಗೆ ಅಗತ್ಯ ಕ್ರಮಗಳನ್ನು ಕೈಗೊಂಡಿರುವುದಾಗಿ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.