ಗಾಂಧೀನಗರ್/ Gandhinagar : ಗುಜರಾತ್‌ನಲ್ಲಿ (Gujarat) ವ್ಯಾಪಕ ಮಳೆಯಾಗುತ್ತಿದ್ದು, ಇಲ್ಲಿಯವರೆಗೆ ಮಲೆಗೆ 15 ಜನ ಬಲಿಯಾಗಿದ್ದಾರೆ. ಇನ್ನೂ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚೆಯನ್ನು ಕೇಂದ್ರ ಹವಾಮಾನ ಇಲಾಖೆ (Meteorological Department) ಸೂಚಿಸಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.
ಹವಾಮಾನ ಇಲಾಖೆ ಪ್ರವಾಹ ಪರಿಸ್ಥಿತಿ ನಡುವೆ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, 11 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ (Red Alert) ಮತ್ತು 22 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ (Yellow Alert) ಘೋಷಿಸಲಾಗಿದೆ. ಕಚ್ಛ್, ದ್ವಾರಕಾ, ಜಾಮ್‌ನಗರ, ಮೊರ್ಬಿ, ಸುರೇಂದ್ರನಗರ, ಜುನಾಗಢ್, ರಾಜ್‌ಕೋಟ್, ಬೊಟಾಡ್, ಗಿರ್ಸೋಮನಾಥ್, ಅಮ್ರೇಲಿ ಮತ್ತು ಭಾವನಗರ ಸೇರಿದಂತೆ ಸೌರಾಷ್ಟ್ರ ಪ್ರದೇಶಗಳಿಗೆ ರೆಡ್ ಅಲರ್ಟ್ ಹಾಗೂ ಮಧ್ಯ ಗುಜರಾತ್ ಮತ್ತು ದಕ್ಷಿಣ ಗುಜರಾತ್ ಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ವ್ಯಾಪಕ ಮಳೆಯಿಂದಾಗಿ ಇಲ್ಲಿಯವರೆಗೆ ಸುಮಾರು 15 ಜನ ಸಾವನ್ನಪ್ಪಿದ್ದು, 23 ಸಾವಿರಕ್ಕೂ ಅಧಿಕ ಜನರನ್ನು ಸ್ಥಳಾಂತರಿಸಲಾಗಿದೆ. 300ಕ್ಕೂ ಅಧಿಕ ಜನರನ್ನು ರಕ್ಷಿಸಲಾಗಿದೆ. 14 ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ತುಕಡಿಗಳು ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆಯ 22 ತುಕಡಿಗಳನ್ನು ನಿಯೋಜಿಸಲಾಗಿದೆ. ಹಲವೆಡೆ ಜನ- ಜೀವನ ಸಂಪೂರ್ಣವಾಗಿ ಅಸ್ತವ್ಯಸ್ಥಗೊಂಡಿದೆ.








