ಬೆಂಗಳೂರು: ರಾಜ್ಯದಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ರಾಜ್ಯದಲ್ಲಿ ಮತ್ತೆ ಮಳೆಯಾಗುವ (Rain) ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (IMD) ನೀಡಿದ್ದು, ಜನರು ಆತಂಕ ಪಡುವಂತಾಗಿದೆ.
ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಜಿಲ್ಲೆಗಳಲ್ಲಿ ಇಂದಿನಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಎರಡೂ ಭಾಗದ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಆಗಸ್ಟ್ 29ರಿಂದ 31ರವರೆಗೆ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಆಗಸ್ಟ್ 29ರಿಂದ 30ರವರೆಗೆ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಿದೆ. ಆಗಸ್ಟ್ 29ರಿಂದ ಸೆಪ್ಟೆಂಬರ್ 1ರವರೆಗೆ ಉತ್ತರ ಒಳನಾಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಹಲವೆಡೆ ಈಗಾಗಲೇ ಮಳೆಯಿಂದಾಗಿ ಜನ- ಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ಮಳೆಯಿಂದಾಗಿ ಹಲವೆಡೆ ರೈತರು ಕಂಗಾಲಾಗಿದ್ದಾರೆ.