ಬೆಂಗಳೂರು: 16ನೇ ಹಣಕಾಸು ಆಯೋಗದ ಮುಂದೆ ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರು ಅಭಿವೃದ್ಧಿಗಾಗಿ ಬರೋಬ್ಬರಿ 27 ಸಾವಿರ ಕೋಟಿ ರೂ. ಅನುದಾನದ ಬೇಡಿಕೆ ಇಟ್ಟಿದ್ದಾರೆ.
5 ವರ್ಷಗಳ ಅವಧಿಗೆ ಬೆಂಗಳೂರು ಅಭಿವೃದ್ಧಿ ಮಾಡುವುದಕ್ಕಾಗಿ ಈ ಬೇಡಿಕೆ ಇಟ್ಟಿದ್ದಾರೆ. ರಾಜ್ಯಕ್ಕೆ ಬಂದಿದ್ದ ಆಯೋಗದ ಮುಂದೆ ಸಿಎಂ ಸಿದ್ದರಾಮಯ್ಯ (CM Siddaramaiah) ಬೆಂಗಳೂರಿಗೆ 27 ಸಾವಿರ ಕೋಟಿ ರೂ. ಅನುದಾನ ನೀಡುವಂತೆ ಕೋರಿದ್ದಾರೆ.
ಸಿಲಿಕಾನ್ ಸಿಟಿಯ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದೆ. ಇದರ ಅಭಿವೃದ್ಧಿ ಆಗಬೇಕಿದೆ. ಹೀಗಾಗಿ 5 ವರ್ಷಗಳಲ್ಲಿ 55,586 ಕೋಟಿ ರೂ. ಅನುದಾನದ ಅವಶ್ಯಕತೆ ಇದೆ. ಈ ಪೈಕಿ 27,799 ಕೋಟಿ ರೂ. ಅನುದಾನ ನೀಡುವಂತೆ ಮನವಿ ಮಾಡಿದ್ದಾರೆ.
ಅಲ್ಲದೇ, ಕಲ್ಯಾಣ ಕರ್ನಾಟಕದ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ 25 ಸಾವಿರ ಕೋಟಿ ರೂ. ವ್ಯಯಿಸಲು ಯೋಜನೆ ರೂಪಿಸಿದೆ. ಆಯೋಗ 25 ಸಾವಿರ ಕೋಟಿ ರೂ. ನೀಡಬೇಕಿದೆ. ಪಶ್ಚಿಮ ಘಟ್ಟಗಳ ಅತ್ಯಂತ ದುರ್ಬಲ ಪ್ರದೇಶಗಳಲ್ಲಿ ಪರಿಣಾಮಕಾರಿ ವಿಪತ್ತು ತಗ್ಗಿಸುವಿಕೆ ಮತ್ತು ಸಕಾಲ ಪರಿಹಾರ ಮತ್ತು ಪುನರ್ವಸತಿ ಕ್ರಮಗಳಿಗೆ 10 ಸಾವಿರ ಕೋಟಿ ರೂ. ಅನುದಾನದ ಅವಶ್ಯವಿದೆ ಎಂದು ಮನವಿ ಮಾಡಿದ್ದಾರೆ.








