ಬೆಂಗಳೂರು: ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿರುವ ದರ್ಶನ್ ಅಧಿಕಾರಿಗಳ ಎದುರು ಪಶ್ಚಾತಾಪದ ಮಾತುಗಳನ್ನು ಆಡಿದ್ದಾರೆ ಎನ್ನಲಾಗಿದೆ.
ಸರ್, ನನ್ನ ಟೈಮ್ ಸರಿಯಿಲ್ಲ. ನನ್ನ ಗ್ರಹಚಾರ ಸರಿಯಿಲ್ಲ ಅಷ್ಟೇ ಎಂದು ದರ್ಶನ್ ಪೊಲೀಸರ ಎದುರು ಹೇಳಿಕೊಂಡಿದ್ದಾರೆ ಎನ್ನಲಾಗಿದೆ.
ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ರೌಡಿಗಳೊಂದಿಗೆ ಐಷಾರಾಮಿ ಜೀವನ ಸಾಗಿಸುತ್ತಿದ್ದಾರೆ ಎನ್ನುವುದು ಸಾಬೀತಾಗುತ್ತಿದ್ದಂತೆ ದರ್ಶನ್ ರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಹೀಗಾಗಿ ಬೆಂಗಳೂರಿನಿಂದ ಬಳ್ಳಾರಿವರೆಗೂ ಬರುವ ಮಾರ್ಗದ ಮಧ್ಯೆ ಐದು ಗಂಟೆಗಳ ಪ್ರಯಾಣದಲ್ಲಿ ತನ್ನ ಸಿನಿಮಾ ಜರ್ನಿ ಸೇರಿದಂತೆ ಹಲವು ವಿಷಯಗಳ ಕುರಿತು ದರ್ಶನ್ ಪೊಲೀಸರೊಂದಿಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಈ ಸಂದರ್ಭದಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣದ ನಂತರ ಆದ ಬೆಳವಣಿಗೆಯ ಕುರಿತು ಮಾತನಾಡುವಾಗ ಭಾವುಕರಾಗಿದ್ದರು ಎನ್ನಲಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಕುರಿತು ಈಗ ಏನು ಹೇಳಿದ್ರೂ ತಪ್ಪಾಗುತ್ತದೆ. ಕಾನೂನಿನ ಮೂಲಕ ಎಲ್ಲವನ್ನು ಎದುರಿಸುತ್ತೇನೆ ಎಂದು ಕೂಡ ಹೇಳಿದ್ದಾರೆ. ಆದರೆ, ಹೆಚ್ಚು ಹೊತ್ತು ಮೌನವಾಗಿಯೇ ಕಾಲ ಕಳೆದಿದ್ದಾರೆ ಎಂದು ತಿಳಿದು ಬಂದಿದೆ.








