ಅಮರಾವತಿ: ವಿದ್ಯಾರ್ಥಿನಿಯರ ಕಾಲೇಜಿನ ವಾಶ್ ರೂಂನಲ್ಲಿ ಹಿಡನ್ ಕ್ಯಾಮೆರಾ ಇರುವ ಸಂಗತಿಯೊಂದು ಬಹಿರಂಗವಾಗಿದೆ. ಅಲ್ಲದೇ, ಈ ವಿಡಿಯೋ, ಫೋಟೋಗಳನ್ನು ಮಾರಾಟ ಮಡಾಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.
ಆಂಧ್ರಪ್ರದೇಶದ (Andhra Pradesh) ಇಂಜಿನಿಯರಿಂಗ್ ಕಾಲೇಜೊಂದರ (College) ವಿದ್ಯಾರ್ಥಿನಿಯರ ಹಾಸ್ಟೆಲ್‍ನ ವಾಶ್ ರೂಂನಲ್ಲಿ ಹಿಡನ್ ಕ್ಯಾಮೆರಾ (Hidden Camera) ಪತ್ತೆಯಾಗಿದೆ. ಇಲ್ಲಿ ವಿಡಿಯೋ ಸೆರೆ ಹಿಡಿದು ಮಾರಾಟ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಕೃಷ್ಣನ್ ಜಿಲ್ಲೆಯ ಇಂಜಿನಿಯರಿಂಗ್ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಘಟನೆ ಹೊರ ಬೀಳುತ್ತಿದ್ದಂತೆ ಸ್ಥಳೀಯರು ಹಾಗೂ ವಿದ್ಯಾರ್ಥಿನಿಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗುರುವಾರ ವಾಶ್ ರೂಮ್ ನಲ್ಲಿ ಮುಚ್ಚಿಟ್ಟಿದ್ದ ವಸ್ತುವನ್ನು ವಿದ್ಯಾರ್ಥಿನಿ ಗಮನಿಸಿದ್ದರು. ಆಗ ಕ್ಯಾಮೆರಾ ಇರುವುದು ಪತ್ತೆಯಾಗಿದೆ. ಕ್ಯಾಮೆರಾ ಪರಿಶೀಲಿಸಿದಾಗ ವಿಡಿಯೋಗಳನ್ನು ನೋಡಿ ಪ್ರತಿಭಟನೆ ನಡೆಸಿದ್ದಾರೆ.
ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸ್ಟೆಲ್‍ನ ಇಂಜಿನಿಯರಿಂಗ್ ಅಂತಿಮ ವರ್ಷದ ವಿದ್ಯಾರ್ಥಿ ವಿಜಯ್ ಕುಮಾರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆತನ ಲ್ಯಾಪ್‍ಟಾಪ್ ವಶಪಡಿಸಿಕೊಳ್ಳಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.
300ಕ್ಕೂ ಹೆಚ್ಚು ಫೋಟೋಗಳು ಮತ್ತು ವೀಡಿಯೊಗಳು ಸೋರಿಕೆಯಾಗಿದ್ದು, ಹಣ ಕೊಟ್ಟು ಕೆಲವು ವಿದ್ಯಾರ್ಥಿಗಳು ಆರೋಪಿ ವಿಜಯ್ ನಿಂದ ವಿಡಿಯೋಗಳನ್ನು ಖರೀದಿಸಿದ್ದರು ಎಂದು ಪೊಲೀಸರು ಹೇಳಿದ್ದಾರೆ. ಸದ್ಯ ಈ ಘಟನೆಯನ್ನು ಆಂಧ್ರ ಸರ್ಕಾರ ಹಾಗೂ ಪೊಲೀಸರು ಗಂಭೀರವಾಗಿ ತೆಗೆದುಕೊಂಡಿದ್ದು, ತನಿಖೆ ನಡೆದಿದೆ.