ಕೊಪ್ಪಳ: ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ ನಡೆಸಿರುವ ಘಟನೆ ನಡೆದಿದೆ.
ಕ್ರೀಡಾಕೂಟ ನಡೆದಿದ್ದ ಸಂದರ್ಭದಲ್ಲಿ ಹೆಜ್ಜೇನು ದಾಳಿ ನಡೆಸಿದ್ದು, ಘಟನೆಯಲ್ಲಿ 40ಕ್ಕೂ ಅಧಿಕ ಮಕ್ಕಳು ಗಾಯಗೊಳ್ಳುವಂತಾಗಿದೆ. ಅಲ್ಲದೇ, ಈ ಘಟನೆಯಲ್ಲಿ ಸಿಲುಕಿರುವ 8 ಜನ ಮಕ್ಕಳ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಈ ಘಟನೆ ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾ ಪಟ್ಟಣದ ಕಿತ್ತೂರು ಚೆನ್ನಮ್ಮ ವಸತಿ ಶಾಲಾ ಆವರಣದಲ್ಲಿ ನಡೆದಿದೆ. ವಲಯ ಮಟ್ಟದ ಕ್ರೀಡಾಕೂಟ ನಡೆದ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ತಾವರಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.








