ಬೀದರ್: ರಾಜ್ಯದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಕಲ್ಯಾಣ ಕರ್ನಾಟಕ ಭಾಗದಲ್ಲಿ ವ್ಯಾಪಕವಾಗಿ ಸುರಿಯುತ್ತಿದೆ. ಮುಂದಿನ ಒಂದು ವಾರ ಹಲವು ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೀದರ್ ಜಿಲ್ಲೆಯಲ್ಲಿ ಸೋಮವಾರ ಭಾರೀ ಮಳೆಯಾಗುವ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ ರಜೆ ಘೋಷಿಸಲಾಗಿದೆ.
ಬೀದರ್ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಸತತ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಬೀದರ್ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಿಸಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರ ಸೂಚನೆಯ ಮೇರೆಗೆ ಆದೇಶ ಹೊರಡಿಸಲಾಗಿದೆ.
ಸೋಮವಾರವೂ ಧಾರಾಕಾರ ಮಳೆ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಹವಾಮಾನ ಇಲಾಖೆ ಈಗಾಗಲೇ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ. ಬೀದರ್ ಅಷ್ಟೇ ಅಲ್ಲದೇ, ಕಲಬುರಗಿ, ಯಾದಗಿರಿ, ಬೀದರ್ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕೂಡ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಮಳೆಯಿಂದಾಗಿ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿವೆ.








