ನವದೆಹಲಿ: ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸುಪ್ರೀಂ ಕೋರ್ಟ್ ಮೆಟ್ಟಿಲು ಏರಿದ್ದಾರೆ.
ಆದಾಯಕ್ಕಿಂತ ಹೆಚ್ಚು ಆಸ್ತಿ (Disproportionate Assets) ಮಾಡಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಸುಪ್ರೀಂ ಕೋರ್ಟ್ (Supreme Court) ಮೆಟ್ಟಿಲು ಏರಿದ್ದಾರೆ.
ಡಿಕೆ ಶಿವಕುಮಾರ್ ವಿರುದ್ಧ ದಾಖಲಾಗಿದ್ದ ಆದಾಯಕ್ಕಿಂತ ಅಧಿಕ ಆಸ್ತಿ ಸಂಪಾದಿಸಿದ ಪ್ರಕರಣದ ತನಿಖೆಯನ್ನು ಸಿಬಿಐ ನಡೆಸುತ್ತಿತ್ತು. ಸಿಬಿಐಗೆ (CBI) ನೀಡಿದ ತನಿಖೆಯನ್ನು ರಾಜ್ಯ ಸರ್ಕಾರ ಹಿಂಪಡೆದಿತ್ತು. ಹೀಗಾಗಿ ಸರ್ಕಾರದ ನಿರ್ಧಾರ ಪ್ರಶ್ನಿಸಿ ಶಾಸಕ ಯತ್ನಾಳ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ರಾಜ್ಯ ಸರ್ಕಾರ ಮತ್ತು ಸಿಬಿಐ ನಡುವಿನ ಪ್ರಕರಣವನ್ನು ಸುಪ್ರೀಂ ಕೋರ್ಟ್ ತೀರ್ಮಾನಿಸಬೇಕು. ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿದರೆ ಸೂಕ್ತ ಎಂದು ಹೈಕೋರ್ಟ್ ಪೀಠ ಅಭಿಪ್ರಾಯ ವ್ಯಕ್ತಪಡಿಸಿ ಎರಡು ಅರ್ಜಿಗಳನ್ನು ವಜಾ ಮಾಡಿತ್ತು. ಹೀಗಾಗಿ ಯತ್ನಾಳ್ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ.








