ದ.ಕ. ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಅವರಿಗೆ ಕೊರೊನಾ ಸೋಂಕು
ಮಂಗಳೂರು, ಜುಲೈ 5: ದಕ್ಷಿಣ ಕನ್ನಡ ಜಿಲ್ಲೆಯ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ನಿನ್ನೆ ಮಾಜಿ ಸಚಿವರ ಪತ್ನಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಮಾಜಿ ಕೇಂದ್ರ ಸಚಿವ ಮತ್ತು ಅವರ ಪತ್ನಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ,
ಜನಾರ್ದನ ಪೂಜಾರಿ ಅವರು ಆರೋಗ್ಯವಾಗಿದ್ದು, ಅವರಲ್ಲಿ ಕೊರೊನಾ ಸೋಂಕಿನ ಯಾವುದೇ ಲಕ್ಷಣಗಳು ಕಂಡು ಬಂದಿಲ್ಲ. ಮುಂಜಾಗ್ರತಾ ಕ್ರಮವಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಯಾರೂ ಕೂಡ ಆತಂಕ ಪಡುವ ಅಗತ್ಯವಿಲ್ಲ ಎಂದು ಅವರ ಕುಟುಂಬ ವರ್ಗ ತಿಳಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತಿದ್ದು, ನಿನ್ನೆಯ ದಿನ ಜಿಲ್ಲೆಯಲ್ಲಿ 10 ದಿನದ ಮಗು ಸೇರಿದಂತೆ 75 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ.








