ಇಸ್ಲಾಮಾಬಾದ್: ಬಾಂಗ್ಲಾದೇಶದಲ್ಲಿನ ಜನರು ಬೀದಿಗಿಳಿದಂತೆ ಪಾಕ್(Pakistan) ನಲ್ಲಿಯೂ ಜನರು ಬೀದಿಗೆ ಇಳಿದಿದ್ದಾರೆ.
ಮಾಜಿ ಪ್ರದಾನಿ ಇಮ್ರಾನ್ ಖಾನ್(Imran Khan) ಬಿಡುಗಡೆಗೆ ಆಗ್ರಹಿಸಿ ಅಲ್ಲಿನ ಜನರು ಬೀದಿಗೆ ಇಳಿದು ಪ್ರತಿಭಟನೆ ನಡೆಸಿದ್ದಾರೆ. ರಾಜಧಾನಿ ಇಸ್ಲಾಮಾಬಾದ್ ನಲ್ಲಿ (Islamabad) ಜನರು ಬೀದಿಗೆ ಇಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.
ಇಮ್ರಾನ್ ಖಾನ್ ಅವರ ತೆಹ್ರೀಕ್-ಎ-ಇನ್ಸಾಫ್ (PTI) ಪಕ್ಷ ಇಸ್ಲಾಮಾಬಾದ್ ನಲ್ಲಿ ಪ್ರತಿಭಟನಾ ಸಭೆ ನಡೆಸಿ, ಈಗ ರಾಜಧಾನಿಯಲ್ಲಿ ಬೀದಿಗೆ ಇಳಿದು ಪ್ರತಿಭಟನೆ (Protest) ಆರಂಭಿಸಿದ್ದಾರೆ.
ಇಮ್ರಾನ್ ಖಾನ್ ಅವರ ಮೇಲೆ ಸುಳ್ಳು ಆರೋಪ ಮಾಡಲಾಗಿದೆ. ಆರೋಪಗಳೆಲ್ಲವೂ ರಾಜಕೀಯ ಪ್ರೇರಿತ. ಒಂದು ವರ್ಷಕ್ಕೂ ಹೆಚ್ಚು ಕಾಲ ಜೈಲಿನಲ್ಲಿರುವ (Jail) ಅವರನ್ನು ಬಿಡುಗಡೆಗೊಳಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಖಾನ್ ಜೈಲಿನಿಂದ ಬಿಡುಗಡೆಯಾಗುವವರೆಗೂ ನಾವು ವಿಶ್ರಮಿಸುವುದಿಲ್ಲ ಬೆಂಬಲಿಗರು ಘೋಷಿಸಿದ್ದಾರೆ.
ಅಲ್ಲದೇ, ಇಸ್ಲಾಮಾಬಾದ್ ಪ್ರವೇಶವನ್ನು ಬಂದ್ ಮಾಡಲಾಗಿದೆ. ಗಲಾಟೆ ನಿಯಂತ್ರಿಸಲು ಭಾರೀ ಸಂಖ್ಯೆಯ ಪೊಲೀಸರನ್ನು ನಿಯೋಜಿಸಲಾಗಿದೆ. ಘಟನೆಯಲ್ಲಿ ಹಲವಾರು ಜನರು ಗಾಯಗೊಂಡಿದ್ದಾರೆ.








