ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಆಂಡ್ ಗ್ಯಾಂಗ್ ಜೈಲುಪಾಲಾಗಿದೆ. ಕೋರ್ಟ್ ಗೆ ಚಾರ್ಜ್ ಶೀಟ್ ಕೂಡ ಸಲ್ಲಿಕೆಯಾಗಿದ್ದು, ಬಳ್ಳಾರಿ ಜೈಲಿನಲ್ಲಿರುವ ದರ್ಶನ್ ಕುಟುಂಬದವರ ಭೇಟಿಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.
ಸಂಕಷ್ಟ ಎದುರಾಗಿದ್ದರಿಂದಾಗಿ ಮುಂದಿನ ಕಾನೂನು ಪ್ರಕ್ರಿಯೆಗಳ ಕುರಿತು ಕುಟುಂಬಸ್ಥರೊಂದಿಗೆ ಮಾತನಾಡಲು ಬಯಸಿರಬಹುದು ಎನ್ನಲಾಗಿದೆ. ಬಳ್ಳಾರಿ ಜೈಲಿನಲ್ಲಿರುವ ದರ್ಶನ್ ಅವರು ಪ್ರಿಸನ್ ಕಾಲ್ ಸಿಸ್ಟಮ್ ಮೂಲಕ ಕುಟುಂಬದವರಿಗೆ ದೂರವಾಣಿ ಕರೆ ಮಾಡಿದ್ದಾರೆ.
ಪತ್ನಿ ವಿಜಯಲಕ್ಷ್ಮಿ ಜೊತೆ 5 ನಿಮಿಷಗಳ ಕಾಲ ಮಾತನಾಡಿದ್ದಾರೆ. ಮುಂದಿನ ಕಾನೂನು ಹೋರಾಟದ ಕುರಿತು ಪತ್ನಿ ಜೊತೆ ಚರ್ಚೆ ಮಾಡಿದ್ದಾರೆ. ಪತ್ನಿ ಜೊತೆ ಮಾತನಾಡುವಾಗ ಅವರು ಭಾವುಕರಾಗಿದ್ದಾರೆ ಎನ್ನಲಾಗಿದೆ.
ಕೇವಲ 5 ನಿಮಿಷದಲ್ಲಿ ಅವರಿಗೆ ಸಂಪೂರ್ಣ ಮಾತನಾಡಲು ಆಗಿಲ್ಲ ಎನ್ನಲಾಗಿದ್ದು, ಪತ್ನಿ ಮತ್ತು ತಾಯಿ ಜೊತೆ ನೇರವಾಗಿ ಮಾತನಾಡಲು ಅವರು ತೀರ್ಮಾನಿಸಿದ್ದಾರೆ. ಬುಧವಾರ ಬಳ್ಳಾರಿಗೆ ಪತ್ನಿ ವಿಜಯಲಕ್ಷ್ಮೀ ಬರುವ ಸಾಧ್ಯತೆ ಇದೆ. ಈ ಬಗ್ಗೆ ದರ್ಶನ್ ಕುಟುಂಬಸ್ಥರು ಬಳ್ಳಾರಿಯ ಜೈಲಧಿಕಾರಿಗಳಿಗೂ ಮಾಹಿತಿ ನೀಡಿದ್ದಾರೆ. ಪತ್ನಿ ವಿಜಯಲಕ್ಷ್ಮಿ ಮತ್ತು ತಾಯಿ ಮೀನಾ ಕೂಡ ಬರುವುದಾಗಿ ಮಾಹಿತಿ ನೀಡಿದ್ದಾರೆ. ಸಂಜೆ 4 ಗಂಟೆಯ ನಂತರ ಬಳ್ಳಾರಿ ಸೆಂಟ್ರಲ್ ಜೈಲಿಗೆ ಬರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.