ನವದೆಹಲಿ: ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಎಲ್ಲ ಕ್ಷೇತ್ರಗಳಲ್ಲಿಯೂ ಸ್ಪರ್ಧಿಸಲು ಆಮ್ ಆದ್ಮಿ ಪಕ್ಷ ಸಿದ್ಧತೆ ನಡೆಸಿದೆ. ಅ. 5ರಂದು ನಡೆಯಲಿರುವ ಹರಿಯಾಣ ವಿಧಾನಸಭಾ ಚುನಾವಣೆಗೆ (Haryana Assembly Election) ಆಮ್ ಆದ್ಮಿ ಪಕ್ಷ (Aam Aadmi Party) ಸೆ. 12ರಂದು ತನ್ನ 7ನೇ ಪಟ್ಟಿ ಬಿಡುಗೆ ಮಾಡಿದೆ.
ಬಿಡುಗಡೆಗೊಳಿಸಿದ ಪಟ್ಟಿಯ ಮೂಲಕ ರಾಜ್ಯದ ಎಲ್ಲ 90 ಕ್ಷೇತ್ರಗಳಿಗೂ ಅಭ್ಯರ್ಥಿಗಳನ್ನು ಘೋಷಿಸಿದೆ. ಅರವಿಂದ್ ಕೇಜ್ರಿವಾಲ್ (Arvind Kejrival) ನೇತೃತ್ವದ ಆಮ್ ಆದ್ಮಿ ಪಕ್ಷ ಹಾಗೂ ಕಾಂಗ್ರೆಸ್ ಪಕ್ಷ ಮೈತ್ರಿ ಮಾಡಿಕೊಂಡು ಸ್ಪರ್ಧಿಸಲು ಮುಂದಾಗಿದ್ದವು. ಆದರೆ, ಸೀಟು ಹಂಚಿಕೆ ವಿಚಾರ ಫಲ ನೀಡದ ಹಿನ್ನೆಲೆಯಲ್ಲಿ ಆಪ್ ಏಕಾಂಗಿಯಾಗಿ ಕಣಕ್ಕೆ ಇಳಿಯಲು ಮುಂದಾಗಿದೆ. ಹೀಗಾಗಿ ಆಪ್ ಹಾಗೂ ಕಾಂಗ್ರೆಸ್ ಪರಸ್ಪರ ತೊಡೆ ತಟ್ಟಿವೆ