ನವದೆಹಲಿ: ವ್ಯಾಪಕ ಮಳೆಯಿಂದಾಗಿ ದೆಹಲಿ ಸಂಪೂರ್ಣವಾಗಿ ಅಸ್ತವ್ಯಸ್ಥವಾಗಿದೆ. ಹಲವು ಪ್ರದೇಶಗಳಲ್ಲಿ ನೀರು ಸಂಪೂರ್ಣವಾಗಿ ತುಂಬಿದ್ದು, ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ಕೆಲವು ಪ್ರದೇಶಗಳಲ್ಲಿ ಆರೆಂಜ್ ಆಲರ್ಟ್ (Orange Alert) ಘೋಷಿಸಲಾಗಿದೆ. ಸಾಧಾರಣ ಮಳೆ ಹಾಗೂ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (Indian Meteorological Department) ಮೂನ್ಸೂಚನೆ ನೀಡಿದೆ.
ಮಳೆಯಿಂದಾಗಿ ನಗರದ ಕೆಲವು ಪ್ರದೇಶಗಳು ಸಂಪೂರ್ಣವಾಗಿ ಜಲಾವೃತಗೊಂಡಿವೆ. ವಾಹನ ಸವಾರರು ಪರದಾಡುವಂತಾಗಿದೆ. ಮುಂದಿನ ಕೆಲವು ಗಂಟೆಗಳ ಕಾಲ ರಾಷ್ಟ್ರರಾಜಧಾನಿಯ ಹೆಚ್ಚಿನ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ (IMD) ಹೇಳಿದೆ.
ದೆಹಲಿ ಸೇರಿದಂತೆ ಉತ್ತರಾಖಂಡ, ಉತ್ತರಪ್ರದೇಶದ ಪಶ್ಚಿಮ ಭಾಗ, ಪಶ್ಚಿಮ ಬಂಗಾಳ, ಮಿಜೋರಾಮ್ ಹಾಗೂ ತ್ರಿಪುರಾ ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯನ್ನು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.