ಹಾಸನ: ಕ್ಷುಲ್ಲಕ ಕಾರಣಕ್ಕೆ ರೌಡಿಶೀಟರ್ ಒಬ್ಬಾತ ವಾಟರ್ ಮ್ಯಾನ್ ಗೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ.
ಈ ಘಟನೆ ಜಿಲ್ಲೆಯ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮದ್ಯದ ಅಮಲಿನಲ್ಲಿದ್ದ ರೌಡಿಶೀಟರ್ ಕ್ಷುಲ್ಲಕ ಕಾರಾಣಕ್ಕೆ ವಾಟರ್ ಮ್ಯಾನ್ ಚಾಕುವಿನಿಂದ ಇರಿದಿದ್ದಾನೆ. ಗಣೇಶ್ (27) ಕೊಲೆಯಾಗಿರುವ ವ್ಯಕ್ತಿ ಎನ್ನಲಾಗಿದೆ.
ಚೀಕನಹಳ್ಳಿ ಗ್ರಾಮದಲ್ಲಿ ವಾಟರ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ಗಣೇಶ್, ಶುಕ್ರವಾರದಂದು ರಾತ್ರಿ ವೇಳೆ ಗ್ರಾಮದಲ್ಲಿನ ಆಟೋ ನಿಲ್ದಾಣದ ಹತ್ತಿರ ನಿಂತಿದ್ದಾರೆ. ಸಂದರ್ಭದಲ್ಲಿ ಕುಡಿದಿದ್ದ ರೌಡಿಶೀಟರ್ ಮಧು ಕ್ಷುಲ್ಲಕ ಕಾರಣಕ್ಕೆ ಗಣೇಶ್ ಜೊತೆ ಜಗಳ ಮಾಡಿದ್ದಾನೆ. ಆಗ ಮಾತಿಗೆ ಮಾತು ಬೆಳೆದು ಜಗಳ ವಿಕೋಪಕ್ಕೆ ತಿರುಗಿದೆ. ಆನಂತರ ರೌಡಿಶೀಟರ್ ಚಾಕುವಿನಿಂದ ಇರಿದಿದ್ದಾನೆ. ತೀವ್ರ ರಕ್ತಸ್ರಾವದಿಂದ ಗಣೇಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಬೆಂಗಳೂರಿನಲ್ಲಿ (Bengaluru) ವಾಸವಾಗಿದ್ದ ರೌಡಿಶೀಟರ್ ಮಧು ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಬಂದಿದ್ದ. ಹತ್ಯೆಯನಂತರ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಅರೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಬಲೆ ಬೀಸಿದ್ದಾರೆ.