ಮಡಿಕೇರಿ: ಸರಿಯಾಗಿ ವೇತನ (Salary) ಪಾವತಿಸುತ್ತಿಲ್ಲ ಎಂದು ಆರೋಪಿಸಿ ಕೆಎಸ್‌ಆರ್‌ಟಿಸಿಯ (KSRTC) 48 ಹೊರಗುತ್ತಿಗೆ ಚಾಲಕರು ಪ್ರತಿಭಟನೆ ನಡೆಸಿದ್ದಾರೆ.
ಮಡಿಕೇರಿಯಲ್ಲಿ ಸೆ. 14ರಂದು ಪ್ರತಿಭಟನೆ ನಡೆಸಿದ್ದಾರೆ. ಸರಿಯಾದ ವೇತನ ನೀಡುತ್ತಿಲ್ಲ ಎಂದು ಬೆಳಿಗ್ಗೆಯಿಂದಲೇ ಬಸ್ಸುಗಳನ್ನು ರಸ್ತೆಗೆ ಇಳಿಸದೆ ಪ್ರತಿಭಟನೆ ನಡೆಸುತ್ತಿದ್ದಾರೆ. ಹೀಗಾಗಿ ಹಲವು ಮಾರ್ಗಗಳಲ್ಲಿ ಬಸ್ ಸಂಚಾರ ಬಂದ್ ಆಗಿದೆ.
ಹೊರಗುತ್ತಿಗೆ ಆಧಾರದಲ್ಲಿ ನೇಮಕವಾಗಿದ್ದ ಬಸ್ಸು ಚಾಲಕರು ಪೂಜ್ಯಾಯ ಸೆಕ್ಯುರಿಟಿ ಏಜೆನ್ಸಿ ಮೂಲಕ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ಏಜೆನ್ಸಿ ಕೆಲಸಗಾರರಿಗೆ ಪ್ರತಿ ತಿಂಗಳು 23 ಸಾವಿರ ರೂ. ಸಂಬಳ ನೀಡುತ್ತಿತ್ತು. ಆದರೆ, ಸಾಕಷ್ಟು ಒತ್ತಾಯದ ನಂತರ ಈಗ ಏಜೆನ್ಸಿ 13, 14 ಸಾವಿರ ರೂ. ಪಾವತಿಸುತ್ತಿದೆ.
ಸಿಎಲ್ ರಜೆ ಕೊಡದ ಏಜೆನ್ಸಿ ಯಾವುದೇ ಅಪಘಾತವಾದರೂ ಚಾಲಕರನ್ನೇ ಹೊಣೆ ಮಾಡುತ್ತಿದೆ. ಏಜೆನ್ಸಿ ಪೂರ್ಣ ಪ್ರಮಾಣದ ವೇತನ ಹಾಕುವವರೆಗೂ ಬಸ್ಸು ಸಂಚಾರ ಅರಂಭ ಮಾಡುವುದಿಲ್ಲ ಎಂದು 48 ಬಸ್ಸು ಚಾಲಕರು ಪಟ್ಟು ಹಿಡಿದು ಪ್ರತಿಭಟನೆ ನಡೆಸಿದ್ದಾರೆ.ಹೀಗಾಗಿ ಹಲವೆಡೆ ಬಸ್ ತೆರಳದೆ ಪ್ರಯಾಣಿಕರು ಸಂಕಷ್ಟ ಪಡುವಂತಾಗಿದೆ.