ಶ್ರೀನಗರ: ಜಮ್ಮು ಮತ್ತು ಕಾಶ್ಮೀರ (Jammu & Kashmir) ವಿಧಾನಸಭೆಗೆ ಮೊದಲ ಹಂತದ ಮತದಾನ ಇಂದು ನಡೆಯಲಿದೆ. ರಾಜ್ಯದ 90 ಕ್ಷೇತ್ರಗಳ ಪೈಕಿ 24 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.
ಜಮ್ಮು ಮತ್ತು ಕಾಶ್ಮೀರವು 2014 ರ ನಂತರ ತನ್ನ ಮೊದಲ ಅಸೆಂಬ್ಲಿ ಚುನಾವಣೆಯನ್ನು ನೋಡುತ್ತದೆ. 2019 ರಲ್ಲಿ ರಾಜ್ಯಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ್ದ 370 ನೇ ವಿಧಿ ತೆಗೆದು ಹಾಕಿದ ನಂತರ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಚುನಾವಣೆ ನಡೆಯುತ್ತಿದೆ. ವಿಧಾನಸಭೆ ಚುನಾವಣೆಯನ್ನು ಕೇಂದ್ರಾಡಳಿತ ಪ್ರದೇಶವಾಗಿ ನೋಡುತ್ತಿರುವುದು ಕೂಡ ಇದೇ ಮೊದಲು.
ಮೋದಿ, ಅಮಿತ್ ಶಾ ನೇತೃತ್ವದ ಬಿಜೆಪಿ, ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿಕೂಡ, ಮೆಹಬೂಬಾ ಮುಫ್ತಿಯವರ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ ಮತ್ತು ಇತರ ಪಕ್ಷಗಳು ಅಬ್ದುಲ್ ಘನಿ ಲೋನ್ ಅವರ ಪೀಪಲ್ಸ್ ಕಾನ್ಫರೆನ್ಸ್, ಗುಲಾಮ್ ನಬಿ ಆಜಾದ್ ಅವರ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಆಜಾದ್ ಪಾರ್ಟಿ ಮತ್ತು ಅಲ್ತಾಫ್ ಬುಖಾರಿಯವರ ಅಪ್ನಿ ಪಾರ್ಟಿ ಚುನಾವಣೆಯಲ್ಲಿ ಸ್ಪರ್ಧಿಸಲಿವೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಇತ್ತೀಚಿನ ತಿಂಗಳುಗಳಲ್ಲಿ ಭಯೋತ್ಪಾದಕ ಘಟನೆಗಳು ಹೆಚ್ಚುತ್ತಿವೆ. ಈ ಆತಂಕದಲ್ಲಿಯೇ ಚುನಾವಣೆ ನಡೆಯುತ್ತಿದೆ.