ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ಬಿಜೆಪಿ ಶಾಸಕ ಮುನಿರತ್ನ (Muniratna) ಗೆ 14 ದಿನಗಳ ನ್ಯಾಯಾಂಗ ಬಂಧನ (Judicial Custody)ನ ವಿಧಿಸಿ 42ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.
ಬೆದರಿಕೆ ಹಾಗೂ ಜಾತಿ ನಿಂದನೆ ಪ್ರಕರಣದಲ್ಲಿ ಅರೆಸ್ಟ್ ಆಗಿ ಜೈಲು ಸೇರಿದ ವೇಳೆ ಮುನಿರತ್ನ ವಿರುದ್ಧ ಅತ್ಯಾಚಾರ ಆರೋಪ ದಾಖಲಾಗಿತ್ತು. ಹೀಗಾಗಿ ಜಾಮೀನು ಪಡೆದ ನಂತರ ಪೊಲೀಸರು ಅತ್ಯಾಚಾರ ಪ್ರಕರಣದಲ್ಲಿ ಅರೆಸ್ಟ್ ಮಾಡಿದ್ದರು. ವಶಕ್ಕೆ ಪೆಡದ ನಂತರ ಜನಪ್ರತಿನಿಧಿ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಪೊಲೀಸರು ಹಾಜರುಪಡಿಸಿದ್ದರು.
ವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶರು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ನೀಡಿದ್ದಾರೆ. ಈ ಮಧ್ಯೆ ಮುನಿರತ್ನ ವಿರುದ್ಧ ಕೇಳಿ ಬಂದಿರುವ ಅತ್ಯಾಚಾರ ಪ್ರಕರಣದ ತನಿಖೆ ನಡೆಸಲು ಎಸ್ ಐಟಿ (SIT) ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅತ್ಯಾಚಾರ ಪ್ರಕರಣ ಶಾಸಕ ಮುನಿರತ್ನ ಸೇರಿದಂತೆ 7 ಆರೋಪಿಗಳ ವಿರುದ್ಧ ಬುಧವಾರ ಸಂಜೆ ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆಯಲ್ಲಿ ದಾಖಲಾಗಿತ್ತು. 40 ವರ್ಷ ವಯಸ್ಸಿನ ಮಹಿಳೆಯೊಬ್ಬರು ದೂರು ದಾಖಲಿಸಿದ್ದರು.