ಬೆಂಗಳೂರು: ತಿರುಪತಿ ಲಡ್ಡು (Tirupathi Laddu) ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಇರುವ ಅಂಶ ಬೆಳಕಿಗೆ ಬರುತ್ತಿದ್ದಂತೆ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ಹೀಗಾಗಿ ರಾಜ್ಯದ ಎಲ್ಲ ದೇವಾಲಯಗಳ ಪ್ರಸಾದ ಟೆಸ್ಟ್ ಮಾಡಲು ತೀರ್ಮಾನಿಸಲಾಗಿದೆ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೂ ದೇವಾಲಯಗಳ ಅರ್ಚಕರು, ಆಗಮಿಕರ ಹಾಗೂ ಉಪಾಧಿವಂತರ ಒಕ್ಕೂಟದ ತೀರ್ಮಾನಕ್ಕೆ ಪ್ರತಿಕ್ರಿಯಿಸಿದ್ದಾರೆ. ಮಲ್ಲೇಶ್ವರಂ ಟಿಟಿಡಿ (Malleshwaram TTD) ದೇವಸ್ಥಾನದ ಬಗ್ಗೆ ಗಮನ ಹರಿಸುವಂತೆ ಅಧಿಕಾರಿಗಳಿಗೆ ತಿಳಿಸುತ್ತೇನೆ ಎಂದು ಹೇಳಿದ್ದಾರೆ.
ಎಲ್ಲಾ ದೇವಾಲಯಗಳ ಪ್ರಸಾದ ಟೆಸ್ಟ್ ಮಾಡಿಸುತ್ತೇನೆ. ನಮ್ಮ ರಾಜ್ಯದ ಶೇ. 99 ದೇವಾಲಯಗಳು ನಂದಿನಿ ತುಪ್ಪವನ್ನೇ ಬಳಸಿಕೊಳ್ಳುತ್ತಿವೆ. ಈಗಾಗಿ ನಂದಿನಿ ತುಪ್ಪ ಬಳಕೆ ಮಾಡುವಂತೆ ಸೂಚಿಸಲಾಗಿದೆ.