ರಾಮನಗರ: ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಓರ್ವ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ.
ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಈ ಘಟನೆ ಕನಕಪುರ (Kanakapura) ತಾಲೂಕಿನ ದೊಡ್ಡಮುದವಾಡಿ ಗ್ರಾಮದ ಹತ್ತಿರ ಸೋಮವಾರ ಬೆಳಗ್ಗೆ ನಡೆದಿದೆ.
ಬೆಳ್ಳಂಬೆಳಗ್ಗೆ ನಿದ್ರೆ ಮಂಪರಿನಲ್ಲಿದ್ದ ಕಾರು ಚಾಲಕ ನಿಯಂತ್ರಣ ಕಳೆದುಕೊಂಡು ಮರಕ್ಕೆ ಗುದ್ದಿದ್ದಾನೆ. ಡಿಕ್ಕಿಯಾಗಿರುವ ರಭಸಕ್ಕೆ ವಿನಯ್ (24) ಸಾವನ್ನಪ್ಪಿದ್ದಾನೆ. ಅನಿಕೇತ್ ಎಂಬ ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ.
ಕಾರಿನಲ್ಲಿದ್ದವರು ಬೆಂಗಳೂರಿನ (Bengaluru) ಇಟ್ಟಮಡು ನಿವಾಸಿಗಳಾಗಿದ್ದು, ವೀಕೆಂಡ್ ಹಿನ್ನೆಲೆ ರೆಸಾರ್ಟ್ ಗೆ ಬಂದಿದ್ದರು. ಹಿಂತಿರುಗಿ ಹೋಗುವಾಗ ಅಪಘಾತ ಸಂಭವಿಸಿದೆ. ಸ್ಥಳೀಯರು ಗಾಯಾಳುವನ್ನ ಹಾರೋಹಳ್ಳಿಯ ದಯಾನಂದ ಸಾಗರ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ಕನಕಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.








