ಬೆಂಗಳೂರು: ನಗರದ ವೈಯಾಲಿಕಾವಲ್ ನಲ್ಲಿ (Vyalikaval) ಮಹಿಳೆಯನ್ನು ಕೊಲೆ ಮಾಡಿರುವ ಆರೋಪಿ ಪರಾರಿಯಾಗಿದ್ದು, ಪೊಲೀಸರು ಬಲೆ ಬೀಸಿದ್ದಾರೆ.
ಆರೋಪಿ ಪಶ್ಚಿಮ ಬಂಗಾಳದ (West Bengal)ತ್ತ ಪರಾರಿಯಾಗಿದ್ದಾನೆ ಎಂದು ಪೊಲೀಸ್ ಮೂಲಗಳು ಹೇಳಿವೆ. ಹಂತಕನಿಗಾಗಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಸಿಸಿಟಿವಿ ಪರಿಶೀಲನೆ, ಕುಟುಂಬಸ್ಥರು ಹಾಗೂ ಸ್ನೇಹಿತರನ್ನು ಪೊಲೀಸರು ವಿಚಾರಣೆ ಮಾಡಿ ಮಾಹಿತಿ ಪಡೆಯುತ್ತಿದ್ದು, ಪೋಸ್ಟ್ ಮಾರ್ಟಂ ವರದಿ, ಮೊಬೈಲ್, ಸೋಷಿಯಲ್ ಮೀಡಿಯಾ ಅಕೌಂಟ್ ಗಳ ಪರಿಶೀಲನೆಯನ್ನು ಕೂಡ ಪೊಲೀಸರು ನಡೆಸುತ್ತಿದ್ದಾರೆ.
ಮಹಿಳೆಯೊಬ್ಬರನ್ನು ಭೀಕರವಾಗಿ ಕೊಲೆ ಮಾಡಿ 50 ತುಂಡುಗಳನ್ನಾಗಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಆರೋಪಿ ಪರಾರಿಯಾಗಿದ್ದಾನೆ. ಮಹಾಲಕ್ಷ್ಮಿ (29) ಕೊಲೆಯಾಗಿರುವ ಮಹಿಳೆ. ಆರೋಪಿಯು ಹತ್ಯೆ ಮಡಿ ಪೀಸ್ ಪೀಸ್ ಆಗಿ ಕತ್ತರಿಸಿ ನಂತರ ಫ್ರಿಡ್ಜ್ ನಲ್ಲಿಟ್ಟು ಪರಾರಿಯಾಗಿದ್ದಾನೆ. ಹತ್ಯೆ ಮಾಡಿದ ನಂತರ ಮಾಂಸದ ಗುಡ್ಡೆ ಮಾಡಿ ತರಕಾರಿ ಜೋಡಿಸುವಂತೆ ಮೃತದೇಹದ ಭಾಗಗಳನ್ನು ಫ್ರಿಡ್ಜ್ ನಲ್ಲಿ ಇರಿಸಿ ಆರೋಪಿ ಪರಾರಿಯಾಗಿದ್ದಾನೆ.
ಮಹಿಳೆಯ ಸಂಬಂಧಿಕರು ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಮಹಾಲಕ್ಷ್ಮಿ ಬೇರೆ ರಾಜ್ಯದವರಾಗಿದ್ದು, ಕರ್ನಾಟಕದಲ್ಲಿ ನೆಲೆಸಿದ್ದರು. ಗಂಡನಿಂದ ದೂರವಾಗಿದ್ದ ಮಹಾಲಕ್ಷ್ಮಿ ಒಬ್ಬಳೇ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಸದ್ಯ ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.








