ಜೈಪುರ: ಗುಜರಾತಿ ಬೆಡಗಿ ‘ಮಿಸ್ ಯೂನಿವರ್ಸ್ ಇಂಡಿಯಾ 2024’ (Miss Universe India 2024) ಕಿರೀಟ ಮುಡಿಗೇರಿಸಿಕೊಂಡಿದ್ದಾರೆ.
ಗುಜರಾತಿ ಯುವತಿ ರಿಯಾ ಸಿಂಘಾ (Rhea Singha)ಮಿಸ್ ಯೂನಿವರ್ಸ್ ಇಂಡಿಯಾ 2024 ರ ಗ್ರ್ಯಾಂಡ್ ಫಿನಾಲೆಯನ್ನು ಗೆದ್ದಿದ್ದಾರೆ. ಹೀಗಾಗಿ ಅವರು ಜಾಗತಿಕ ವಿಶ್ವ ಸುಂದರಿ 2024ರ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ.
ಈ ವೇಳೆ ಮಾತನಾಡಿದ ಮಿಸ್ ಯೂನಿವರ್ಸ್, ನಾನು ಮಿಸ್ ಯೂನಿವರ್ಸ್ ಇಂಡಿಯಾ 2024 ಪ್ರಶಸ್ತಿ ಗೆದ್ದಿರುವುದು ಸಂತಸ ನೀಡಿದೆ. ಈ ಮಟ್ಟಕ್ಕೆ ಹೋಗಲು ನಾನು ತುಂಬಾ ಕೆಲಸ ಮಾಡಿದ್ದೇನೆ. ಈ ಕಿರೀಟಕ್ಕೆ ನಾನು ಸಾಕಷ್ಟು ಅರ್ಹಳೆಂದು ಪರಿಗಣಿಸಬಹುದು. ಹಿಂದಿನ ವಿಜೇತರಿಂದ ನಾನು ತುಂಬಾ ಸ್ಫೂರ್ತಿ ಪಡೆದಿದ್ದೇನೆ ಎಂದು ಹೇಳಿದ್ದಾರೆ.
ನಟಿ ಮತ್ತು ಮಿಸ್ ಯೂನಿವರ್ಸ್ ಇಂಡಿಯಾ 2015, ಊರ್ವಶಿ ರೌಟೇಲಾ ಈವೆಂಟ್ ನಲ್ಲಿ ತೀರ್ಪುಗಾರರಾಗಿದ್ದರು. ಭಾರತವು ಈ ಬಾರಿ ವಿಶ್ವ ಸುಂದರಿ ಕಿರೀಟವನ್ನು ಗೆಲ್ಲುತ್ತದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.
ರಿಯಾ ಸಿಂಘಾ ಈಗ ಮಿಸ್ ಯೂನಿವರ್ಸ್ 2024 ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲು ತಯಾರಿ ನಡೆಸುತ್ತಿದ್ದಾರೆ. ಈ ವರ್ಷದ ಅಂತ್ಯದಲ್ಲಿ ಈ ಸ್ಪರ್ಧೆ ನಡೆಯಲಿದೆ.