ADVERTISEMENT
Sunday, June 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Politics

ಸಿಎಂ ಮುಡಾ ಪ್ರಕರಣ; ನಾಳೆಗೆ ಹೊರ ಬೀಳಲಿದೆ ತೀರ್ಪು

ನಾಳೆ ಮಧ್ಯಾಹ್ನ 12ಕ್ಕೆ ಭವಿಷ್ಯ

Author2 by Author2
September 23, 2024
in Politics, State, ರಾಜಕೀಯ, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಲ್ಲಿಸಿದ್ದ ಅರ್ಜಿಯ ಭವಿಷ್ಯ ನಾಳೆಗೆ ಹೊರ ಬೀಳಲಿದೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಕೇಸ್ ನಲ್ಲಿ (MUDA Case) ಪ್ರಾಸಿಕ್ಯೂಷನ್‌ ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ (CM Siddaramaiah) ರಿಟ್ ಅರ್ಜಿ ಸಲ್ಲಿಸಿದ್ದರು. ಸದ್ಯ ಹೈಕೋರ್ಟ್ (High Court) ಮಂಗಳವಾರ ತೀರ್ಪು ಪ್ರಕಟಿಸಲಿದೆ.

Related posts

ಬಿಡದಿ ಟೌನ್‌ಶಿಪ್ ಯೋಜನೆಯ ಅಸಲಿ ಪಿತಾಮಹರು ಯಾರು? ಬಿಡದಿ ಟೌನ್‌ಶಿಪ್ ಫೈಲ್ ಓಪನ್ ಮಾಡಿದ ರಾಮಲಿಂಗಾ ರೆಡ್ಡಿ: ಬಿಜೆಪಿ ಮತ್ತು ಜೆಡಿಎಸ್ ನಾಯಕರಿಗೆ ಇತಿಹಾಸದ ಪಾಠ ಶುರು!

ಮೇಕೆದಾಟು ತಡೆದರೆ ತಮಿಳುನಾಡಿಗೆ ಒಂದು ಹನಿ ನೀರು ಸಿಗಲ್ಲ: ತಮಿಳುನಾಡಿನ ಮೊಂಡುತನಕ್ಕೆ ಕರ್ನಾಟಕ ಕೊಡಲಿದೆಯೇ ತಿರುಗೇಟು?;ಸಚಿವ ರಾಮಲಿಂಗಾರೆಡ್ಡಿ ನೀಡಿದ ಎಚ್ಚರಿಕೆ ಹಿಂದಿರುವ ಗುಟ್ಟೇನು?

June 21, 2026
ತಮಿಳುನಾಡಿನ ಬಳಿಕ ಕೇರಳದಿಂದ ಬಂಡೀಪುರ ವಿಚಾರ ಪ್ರಸ್ತಾಪ; ರಾತ್ರಿ ಸಂಚಾರ ನಿಷೇಧ ತೆರವಿಗೆ ಒತ್ತಾಯ

ತಮಿಳುನಾಡಿನ ಬಳಿಕ ಕೇರಳದಿಂದ ಬಂಡೀಪುರ ವಿಚಾರ ಪ್ರಸ್ತಾಪ; ರಾತ್ರಿ ಸಂಚಾರ ನಿಷೇಧ ತೆರವಿಗೆ ಒತ್ತಾಯ

June 21, 2026

ವಾದ-ವಿವಾದ ಆಲಿಸಿದ ನ್ಯಾ. ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಮಧ್ಯಾಹ್ನ 12ಕ್ಕೆ ತೀರ್ಪು ಪ್ರಕಟಿಸಲಿದ್ದಾರೆ. ಸಿದ್ದರಾಮಯ್ಯ ಪರವಾಗಿ ಹಿರಿಯ ಸುಪ್ರೀಂ ಕೋರ್ಟ್‌ ವಕೀಲ ಅಭಿಷೇಕ್‌ ಮನು ಸಿಂಘ್ವಿ ಹಲವರು ವಾದಿಸಿದ್ದಾರೆ.
ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಸಿದ್ದರಾಮಯ್ಯ ಹೆಸರಿನಲ್ಲಿದ್ದ ಕೆಸರೆ ಗ್ರಾಮದ ಸರ್ವೆ ನಂಬರ್ 464ರಲ್ಲಿ 3.16 ಎಕರೆ ಜಮೀನನ್ನು ದೇವನೂರು ಬಡಾವಣೆ ನಿರ್ಮಾಣಕ್ಕೆ ಭೂಸ್ವಾಧೀನ ಮಾಡಿಕೊಳ್ಳಲಾಗಿತ್ತು.

ಈ ಜಾಗವನ್ನು ಪತ್ನಿ ಪಾರ್ವತಿ ಅವರಿಗೆ ದಾನ ಪತ್ರದ ಮೂಲಕ ಅವರ ಸಹೋದರ ನೀಡಿದ್ದರು. ಒಟ್ಟು 1,48,104 ಚದರ ಅಡಿ ಜಾಗ ಇತ್ತು. ಅದರ ಬದಲಿಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ 2021ರಲ್ಲಿ ವಿಜಯನಗರ ಬಡಾವಣೆಯಲ್ಲಿ 38,284 ಚದರ ಅಡಿ ಜಾಗ ನೀಡಿತ್ತು.

ಮೈಸೂರಿನ ಕೆಸರೆ ಗ್ರಾಮದ ಸರ್ವೆ ನಂಬರ್ 464ರಲ್ಲಿರುವ 3 ಎಕರೆ 16 ಗುಂಟೆ ಜಾಗವನ್ನು ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರ ಸಹೋದರ, ಪಾರ್ವತಿಯವರಿಗೆ ದಾನವಾಗಿ ನೀಡಿದ್ದರು. ಈ ಜಾಗವನ್ನು ಅಭಿವೃದ್ಧಿಗಾಗಿ ಪ್ರಾಧಿಕಾರ ಕಾನೂನು ಪ್ರಕಾರವೇ ವಶಪಡಿಸಿಕೊಂಡಿತ್ತು. 1998 ರಲ್ಲಿ ನೋಟಿಫೈ ಮಾಡಿತ್ತು. ಇದೇ ಜಾಗದಲ್ಲಿ ದೇವನೂರು 3ನೇ ಹಂತದ ಬಡಾವಣೆಯನ್ನೂ ಅಭಿವೃದ್ಧಿ ಮಾಡಿದೆ.

ವಶಪಡಿಸಿಕೊಂಡ ಜಾಗಕ್ಕೆ ಬದಲಿ ಭೂಮಿ ಕೊಡುವುದು ಪ್ರಾಧಿಕಾರದ ಕರ್ತವ್ಯ. ಹೀಗಾಗಿ ಬದಲಿ ಭೂಮಿ ನೀಡುವಂತೆ 2014ರಲ್ಲಿ ಸಿಎಂ ಪತ್ನಿ ಅರ್ಜಿ ಹಾಕಿದ್ದರು. 2021ರಲ್ಲಿ ಮತ್ತೊಂದು ಪತ್ರ ಬರೆದು 50:50 ಅನುಪಾತದಲ್ಲಿ ಬದಲಿ ನಿವೇಶನ ಕೊಡಿ ಎಂದು ಮನವಿ ಸಲ್ಲಿಸಿದ್ದರು. ಸಿಎಂ ಪತ್ನಿ ಕೋರಿಕೆಯಂತೆ 2021ರಲ್ಲಿ 50:50 ಅನುಪಾತದಲ್ಲಿ ಭೂಮಿ ನೀಡಲಾಗಿದೆ.

ವಶಪಡಿಸಿಕೊಂಡ ಜಾಗ ಬಿಟ್ಟು ಅಥವಾ ಸಮಾನಾಂತರವಾದ ಜಾಗ ಬಿಟ್ಟು ವಿಜಯನಗರದಲ್ಲಿ ಅಭಿವೃದ್ಧಿ ಆಗಿರುವ 38,284 ಚದರಡಿ ಭೂಮಿ ಹಂಚಿಕೆ ಮಾಡಲಾಗಿದೆ. ಅಲ್ಲದೇ 1998ರಲ್ಲಿ ಕಳೆದುಕೊಂಡ ಭೂಮಿಗೆ 2021ರಲ್ಲಿ ಪರಿಹಾರ ನೀಡಲಾಗಿದೆ ಎಂಬುದು ಆರ್‌ಟಿಐ ಕಾರ್ಯಕರ್ತರ ಆರೋಪ. ಸಿಎಂ ಪತ್ನಿ ಅಲ್ಲದೇ ಹಲವು ಮಂದಿ ಭೂಮಿಯನ್ನು ಮುಡಾ ವಶಪಡಿಸಿಕೊಂಡಿದೆ. ಸಿಎಂ ಪತ್ನಿಗೆ ಹಂಚಿಕೆ ಮಾಡಿದಂತೆ ಇವರಿಗೂ ಜಾಗವನ್ನು ವಿಜಯನಗರ ಬಡಾವಣೆಯಲ್ಲಿ ಜಾಗ ಹಂಚಿಕೆ ಮಾಡಿಲ್ಲ. 50:50 ಅನುಪಾತ ನಿಯಮವನ್ನ ದುರುಪಯೋಗಪಡಿಸಿಕೊಂಡು 1998ರಲ್ಲಿ ವಶಪಡಿಸಿಕೊಂಡ ಜಾಗಕ್ಕೆ 2020ರಲ್ಲಿ ಜಾರಿಗೆ ಬಂದ 50-50 ಅನುಪಾತ ಬಳಸಿದ್ದೇಕೆ ಎನ್ನುವುದೇ ಈಗ ವಾದವಾಗಿದೆ.

ಸಿಎಂ ಪತ್ನಿಗೆ ಆರ್ಥಿಕ ಲಾಭ ಮಾಡಿಕೊಡಲು ಮುಡಾ ಅಧಿಕಾರಿಗಳು ಸರ್ಕಾರಕ್ಕೆ ಆರ್ಥಿಕ ನಷ್ಟ ಮಾಡಿದ್ದಾರೆ. ಸಿಎಂ ಅವರು ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದರಿಂದ ಈ ಜಾಗ ಹಂಚಿಕೆ ಮಾಡಲಾಗಿದೆ ಎನ್ನುವ ಗಂಭೀರ ಆರೋಪ ಕೇಳಿಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಇದನ್ನು ಪ್ರಶ್ನಿಸಿ ಸಿಎಂ ಅರ್ಜಿ ಸಲ್ಲಿಸಿದ್ದಾರೆ. ಕೋರ್ಟ್ ಯಾವ ಆದೇಶ ನೀಡುತ್ತದೆ ನೋಡಬೇಕಿದೆ.

Tags: #CM MUDA case; The verdict will be pronounced tomorrow.#sakshanewssakshatv
ShareTweetSendShare
Join us on:

Related Posts

ಬಿಡದಿ ಟೌನ್‌ಶಿಪ್ ಯೋಜನೆಯ ಅಸಲಿ ಪಿತಾಮಹರು ಯಾರು? ಬಿಡದಿ ಟೌನ್‌ಶಿಪ್ ಫೈಲ್ ಓಪನ್ ಮಾಡಿದ ರಾಮಲಿಂಗಾ ರೆಡ್ಡಿ: ಬಿಜೆಪಿ ಮತ್ತು ಜೆಡಿಎಸ್ ನಾಯಕರಿಗೆ ಇತಿಹಾಸದ ಪಾಠ ಶುರು!

ಮೇಕೆದಾಟು ತಡೆದರೆ ತಮಿಳುನಾಡಿಗೆ ಒಂದು ಹನಿ ನೀರು ಸಿಗಲ್ಲ: ತಮಿಳುನಾಡಿನ ಮೊಂಡುತನಕ್ಕೆ ಕರ್ನಾಟಕ ಕೊಡಲಿದೆಯೇ ತಿರುಗೇಟು?;ಸಚಿವ ರಾಮಲಿಂಗಾರೆಡ್ಡಿ ನೀಡಿದ ಎಚ್ಚರಿಕೆ ಹಿಂದಿರುವ ಗುಟ್ಟೇನು?

by Shwetha
June 21, 2026
0

ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ತಮಿಳುನಾಡು ಸರ್ಕಾರ ಅನಗತ್ಯವಾಗಿ ಅಡ್ಡಿಪಡಿಸುತ್ತಿರುವುದಕ್ಕೆ ರಾಜ್ಯ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು...

ತಮಿಳುನಾಡಿನ ಬಳಿಕ ಕೇರಳದಿಂದ ಬಂಡೀಪುರ ವಿಚಾರ ಪ್ರಸ್ತಾಪ; ರಾತ್ರಿ ಸಂಚಾರ ನಿಷೇಧ ತೆರವಿಗೆ ಒತ್ತಾಯ

ತಮಿಳುನಾಡಿನ ಬಳಿಕ ಕೇರಳದಿಂದ ಬಂಡೀಪುರ ವಿಚಾರ ಪ್ರಸ್ತಾಪ; ರಾತ್ರಿ ಸಂಚಾರ ನಿಷೇಧ ತೆರವಿಗೆ ಒತ್ತಾಯ

by Shwetha
June 21, 2026
0

ತಮಿಳುನಾಡಿನ ಮೇಕೆದಾಟು ವಿವಾದದ ಬೆನ್ನಲ್ಲೇ, ಇದೀಗ ಕೇರಳ ಸರ್ಕಾರವು ಬಂಡೀಪುರ ನ್ಯಾಷನಲ್ ಪಾರ್ಕ್ ಮೂಲಕ ರಾತ್ರಿ ಸಂಚಾರ ನಿಷೇಧದ ವಿಚಾರವನ್ನು ಮತ್ತೆ ಮುಂದಿಟ್ಟಿದೆ. ಮಾಹಿತಿಯ ಪ್ರಕಾರ, ಕೇರಳ...

ಆತ್ಮಸಾಕ್ಷಿ ಮಾರಿಕೊಂಡವರ ಪಟ್ಟಿ ನನ್ನ ಬಳಿ ಇದೆ : ದ್ರೋಹಿಗಳ ಮುಖವಾಡ ಕಳಚಲು ಇದೊಂದು ಪರೀಕ್ಷೆ; ಅಡ್ಡ ಮತದಾನ ಮಾಡಿದವರ ವಿರುದ್ಧ ಎಚ್ ಡಿ ಕೆ ಆಕ್ರೋಶ

ಆತ್ಮಸಾಕ್ಷಿ ಮಾರಿಕೊಂಡವರ ಪಟ್ಟಿ ನನ್ನ ಬಳಿ ಇದೆ : ದ್ರೋಹಿಗಳ ಮುಖವಾಡ ಕಳಚಲು ಇದೊಂದು ಪರೀಕ್ಷೆ; ಅಡ್ಡ ಮತದಾನ ಮಾಡಿದವರ ವಿರುದ್ಧ ಎಚ್ ಡಿ ಕೆ ಆಕ್ರೋಶ

by Shwetha
June 21, 2026
0

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ವಿಧಾನಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನದ ಬಗ್ಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಯಾರು ಆತ್ಮಸಾಕ್ಷಿಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ...

ಹುಬ್ಬಳ್ಳಿ-ಗದಗ ಬೈಪಾಸ್ ಮೂಲಕ ಗೋಲ್‌ಗುಂಬಜ್ ಎಕ್ಸ್‌ಪ್ರೆಸ್; ರೈಲ್ವೆ ಮಂಡಳಿಯಿಂದ ಅನುಮೋದನೆ

ಹುಬ್ಬಳ್ಳಿ-ಗದಗ ಬೈಪಾಸ್ ಮೂಲಕ ಗೋಲ್‌ಗುಂಬಜ್ ಎಕ್ಸ್‌ಪ್ರೆಸ್; ರೈಲ್ವೆ ಮಂಡಳಿಯಿಂದ ಅನುಮೋದನೆ

by Shwetha
June 21, 2026
0

ಮೈಸೂರು ಮತ್ತು ಪಂಡರಾಪುರ ನಡುವಿನ ಗೋಲ್‌ಗುಂಬಜ್ ಎಕ್ಸ್‌ಪ್ರೆಸ್ ರೈಲನ್ನು ಹುಬ್ಬಳ್ಳಿ-ಗದಗ ಬೈಪಾಸ್ ಮಾರ್ಗದ ಮೂಲಕ ಸಂಚರಿಸಲು ರೈಲ್ವೆ ಮಂಡಳಿ ಇಂದು ಒಪ್ಪಿಗೆ ನೀಡಿದೆ ಎಂದು ಸಚಿವ ಎಮ್....

ಬೆಂಗಳೂರಿಗರೇ ಎಚ್ಚರ: ರಸ್ತೆ ಮೇಲೆ ಕಸ ಹಾಕಿದ್ರೆ ಮುಗೀತು ಕಥೆ! ಬೆಂಗಳೂರಿನಲ್ಲಿ ಕಸದ ಮಾಫಿಯಾಗೆ ಬ್ರೇಕ್: ಸಚಿವರೇ ಖುದ್ದಾಗಿ ಫೀಲ್ಡ್ ಗೆ ಇಳಿಯೋದು ಗ್ಯಾರಂಟಿ

ಬಿಬಿಎಂಪಿ ಅಧಿಕಾರಿಗಳ ಕಳ್ಳಾಟಕ್ಕೆ ಬ್ರೇಕ್ ಹಾಕಲು ಸಜ್ಜಾದ ಸಚಿವ ಕೃಷ್ಣ ಬೈರೇಗೌಡ :ತೇಪೆ ಹಚ್ಚಿದ ರಸ್ತೆಗೆ ‘ಮೊದಲ ವಿಕೆಟ್’ ಪತನ

by Shwetha
June 21, 2026
0

ಸಿಲಿಕಾನ್ ಸಿಟಿ ಬೆಂಗಳೂರು ಇಂದು ರಸ್ತೆ ಗುಂಡಿಗಳ ನಗರ ಎಂಬ ಕುಖ್ಯಾತಿ ಪಡೆದಿದೆ. ದೇಶ ವಿದೇಶಗಳಿಂದ ಹೂಡಿಕೆದಾರರನ್ನು ಸೆಳೆಯುವ ಈ ಮಹಾನಗರದಲ್ಲಿ ಸವಾರರು ಪ್ರತಿ ನಿತ್ಯ ಪ್ರಾಣವನ್ನು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram