ಯಾದಗಿರಿ: ಗಣೇಶ ವಿಸರ್ಜನೆ ಮೆರವಣಿಗೆ ಸಂದರ್ಭದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ (Pratap Simha) ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಸೆ.21 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಶೋಭಾಯಾತ್ರೆಯಲ್ಲಿ ಪ್ರತಾಪ್ ಸಿಂಹ ಭಾಗವಹಿಸಿದ್ದರು. ಈ ಸಂದ್ರಭದಲ್ಲಿ ಮುಸ್ಲಿಂರ ಕುರಿತು ಪ್ರಚೋದನಕಾರಿ ಹೇಳಿಕೆ ನೀಡಿದ್ದರು.
ಗಣೇಶ ವಿಸರ್ಜನೆ ಸಂದರ್ಭದಲ್ಲಿ ಎಲ್ಲ ಕಡೆ ಕಲ್ಲು ತೂರುವ ಪ್ರವೃತ್ತಿ ಕಾಣಿಸುತ್ತಿದ್ದಾರೆ. ನ್ಯೂಕ್ಲಿಯರ್ ಬಾಂಬ್ ಮಾಡಿದ ಹಿಂದೂಗಳಿಗೆ ಪೆಟ್ರೋಲ್ ಬಾಂಬ್ ಮಾಡೋಕೆ ಬರಲ್ವಾ ಎಂದು ಪ್ರತಾಪ್ ಸಿಂಹ ಮಾತನಾಡಿದ್ದರು. ಅಲ್ಲದೇ, ಹಿಂದೂಗಳು ಕೂಡ ಕೈಯಲ್ಲಿ ಲಾಂಗ್, ಪೆಟ್ರೋಲ್ ಬಾಂಬ್ ಹಿಡಿದುಕೊಂಡು ಬರಬೇಕಾಗುತ್ತದೆ ಎಂಬ ಪ್ರಚೋದನಾತ್ಮಕ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಾದೆ. ಶಹಾಪುರ ಠಾಣೆಯಲ್ಲಿ ಕೇಸ್ ದಾಖಲಲಾಗಿದೆ.








