ಇಂಗ್ಲೆಂಡ್ ತಂಡದ ಆಟಗಾರ ಬೆನ್ ಸ್ಟೋಕ್ಸ್ (Ben Stokes) ಈಗಾಗಲೇ ಎರಡು ಬಾರಿ ಅಂತಾರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ನಿವೃತ್ತಿ ಘೋಷಿಸಿದ್ದರು. ಈಗ ಮತ್ತೆ ಅಂಗಳಕ್ಕೆ ಇಳಿಯಲು ಮುಂದಾಗಿದ್ದಾರೆ ಎನ್ನಲಾಗಿದೆ.
2025ರ ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಮೆಕಲಂ ಇಂಗ್ಲೆಂಡ್ ಏಕದಿನ ತಂಡದ ಹೆಡ್ ಕೋಚ್ ಆಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಇಂಗ್ಲೆಂಡ್ ಟೆಸ್ಟ್ ತಂಡದ ಕೋಚ್ ಬ್ರೆಂಡನ್ ಮೆಕಲಂ ಏಕದಿನ ಮತ್ತು ಟಿ20 ತಂಡಗಳ ತರಬೇತುದಾರನಾಗಿ ಆಯ್ಕೆಯಾಗುತ್ತಿದ್ದಂತೆ, ಬೆನ್ ಸ್ಟೋಕ್ಸ್ ನಿವೃತ್ತಿ ಹಿಂಪಡೆದು ಮತ್ತೆ ಏಕದಿನ ಕ್ರಿಕೆಟ್ನಲ್ಲಿ ತೊಡಗಿಸಿಕೊಳ್ಳಲು ಮುಂದಾಗಿದ್ದಾರೆ.
ಬೆನ್ ಸ್ಟೋಕ್ಸ್ 2022 ರಲ್ಲಿ ಒನ್ಡೇ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದರು. ನಂತರ 2023ರ ಏಕದಿನ ವಿಶ್ವಕಪ್ಗಾಗಿ ತಮ್ಮ ನಿರ್ಧಾರವನ್ನು ಬದಲಿಸಿ ಮತ್ತೆ ಕಣಕ್ಕಿಳಿದಿದ್ದರು. ಏಕದಿನ ವಿಶ್ವಕಪ್ ಬೆನ್ನಲ್ಲೇ ನಿವೃತ್ತರಾಗಿದ್ದ ಬೆನ್ ಸ್ಟೋಕ್ಸ್ ಮತ್ತೆ ಒನ್ ಡೇ ಕ್ರಿಕೆಟ್ನಲ್ಲಿ ಕಣಕ್ಕಿಳಿಯುವ ಸೂಚನೆ ನೀಡಿದ್ದಾರೆ.
ಟ್ ಬಾಲ್ ಕ್ರಿಕೆಟ್ನಲ್ಲಿ ಮುಂದುವರೆಯಲು ನನಗೆ ಅವಕಾಶ ಸಿಕ್ಕರೆ ಖಂಡಿತವಾಗಿಯೂ ನಾನು ಮತ್ತೆ ಕಣಕ್ಕಿಳಿಯುತ್ತೇನೆ. ಕೋಚ್ ಬ್ರೆಂಡನ್ ಮೆಕಲಂ ಕರೆ ಮಾಡಿ ಆಡುವಂತೆ ಕೇಳಿಕೊಂಡರೆ ನಾನು ನೋ ಅನ್ನುವುದಿಲ್ಲ ಎಂದು ಹೇಳಿದ್ದಾರೆ.
ಈ ಮೂಲಕ ನಿವೃತ್ತಿಯಿಂದ ಹೊರಬರಲು ಮನಸ್ಸು ಮಾಡಿರುವುದನ್ನು ಬೆನ್ ಸ್ಟೋಕ್ಸ್ ಬಹಿರಂಗಪಡಿಸಿದ್ದಾರೆ.