ನವದೆಹಲಿ: ಮುಡಾ ಹಗರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದಾಗ ಪ್ರತಿಭಟನೆ ನಡೆಸಿ, ಪ್ರತಿಕೃತಿಗೆ ಚಪ್ಪಲಿ ಹಾರ ಹಾಕಿದೀರಿ. ಆದರೆ, ಈಗ ಹೈಕೋರ್ಟ್ ಆದೇಶ ಆಗಿದೆ. ಯಾರಿಗೆ ಹಾರ ಹಾಕಬೇಕು ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ದೆಹಲಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ವಕೀಲರಾಗಿದ್ದವರು. ನೈತಿಕತೆ ಉಳಿಸಿಕೊಂಡು ಬಂದವರಲ್ಲವೇ? ಲೋಕಾಯಕ್ತ ತನಿಖೆಗೆ ಆದೇಶ ಮಾಡಿದಾಗ ಅಧಿಕಾರದಲ್ಲಿ ಉಳಿಬೇಕಾ ಅಂತ ಅವರೇ ಹೇಳಬೇಕು. ಹೈಕೋರ್ಟ್ (Karnataka Highcourt) ಆದೇಶ ನೀಡಿದೆಯಲ್ಲ, ಈಗ ಚಪ್ಪಲಿ ಹಾರ ಯಾರಿಗೆ ಹಾಕಬೇಕು? ಸಿದ್ದರಾಮಯ್ಯ ಅವರಿಗೆ ಹಾಕಬೇಕಾ? ಇನ್ಯಾರಿಗೆ ಹಾಕ್ತಿರಿ? ಎಂದು ವ್ಯಂಗ್ಯವಾಡಿದ್ದಾರೆ.
ಮಾಡಿದ್ದಾರೆ.
ಮೂಡಾ ಹಗರಣ (MUDA Scam) ದೇಶದ್ಯಾಂತ ಪ್ರಾಮುಖ್ಯತೆ ಪಡೆದಿದೆ. ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಹೈಕೋರ್ಟ್ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿದೆ. ಪ್ರಕರಣ ವರದಿಯನ್ನು ತೀರ್ಪಿನಲ್ಲಿ ಉಲ್ಲೇಖಿಸಿದ್ದಾರೆ. ಕಾನೂನು ತಜ್ಞರು ಅನುಭವದ ಆಧಾರದ ಮೇಲೆ ವಿಶ್ಲೇಷಣೆ ಮಾಡ್ತಿದ್ದಾರೆ.
ನನ್ನ ಪ್ರಕರಣಕ್ಕೂ, ಸಿದ್ದರಾಮಯ್ಯ ಪ್ರಕರಣಕ್ಕೂ ಬಹಳ ವ್ಯತಾಸ ಇದೆ. ಬಿಜೆಪಿ-ಜೆಡಿಎಸ್ ಸೇರಿ ಸರ್ಕಾರವನ್ನು ಅಸ್ಥಿರ ಮಾಡಲು, ನನ್ನ ವರ್ಚಸ್ಸಿಗೆ ಕಪ್ಪು ಮಸಿ ಬಳೆಯಲು ಷಡ್ಯಂತ್ರ ಮಾಡ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಸಿದ್ದರಾಮಯ್ಯ ಹುಟ್ಟು ಹೋರಾಟಗಾರರಂತೆ. ಅವರು ಯಾವ ಹೋರಾಟ ಮಾಡಿದ್ದಾರೆ ಇವರು. ಬಳ್ಳಾರಿ ಪಾದಯಾತ್ರೆ ಬಿಟ್ಟು ಇನ್ನೇನು ಹೋರಾಟ ಮಾಡಿದ್ದಾರೆ? ಎಂದಿದ್ದಾಲೆ.








