ಮೈಸೂರು: ಗ್ರಾಮ ಪಂಚಾಯಿತಿಗಳಲ್ಲಿ ಕರ್ತವ್ಯ ನಿರ್ವಹಿಸುವ ಪೌರ ಕಾರ್ಮಿಕರನ್ನು ಖಾಯಂಗೊಳಿಸುವAತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ ನಡೆಸಿತು.
ಮೈಸೂರು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಸಮಿತಿ ಕಾರ್ಯಕರ್ತರು, ರಾಜ್ಯದಲ್ಲಿ ೬೨೨೦ ಜನ ಪೌರ ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದಾರೆ. ಸೇವೆ ಖಾಯಂ ಆಗದೇ ಸಂಕಷ್ಟದಲ್ಲಿದ್ದಾರೆ. ಹೀಗಾಗಿ ಅವರ ಸೇವೆಯನ್ನು ಸರ್ಕಾರ ಖಾಯಂ ಮಾಡಬೇಕು ಎಂದು ಆಗ್ರಹಿಸಿದರು.
ಗ್ರಾಮ ಪಂಚಾಯಿತಿಗಳ ಪಿಡಿಓಗಳು ಪೌರಕಾರ್ಮಿಕರನ್ನ ಹೀನಾಯವಾಗಿ ಕಾಣುತ್ತಾರೆ. ಆದ್ದರಿಂದ ಗ್ರಾಮ ಪಂಚಾಯಿತಿಗಳಲ್ಲಿ ಕೆಲಸ ಮಾಡುವ ಪೌರಕಾರ್ಮಿಕರನ್ನ ಖಾಯಂಗೊಳಬೇಕು. ಪೌರಕಾರ್ಮಿಕರ ಸೇವಾ ಅವಧಿ ಪರಿಗಣಿಸಿ ಸರ್ಕಾರಿ ಸೌಲಭ್ಯ ನೀಡಬೇಕು. ಕಾರ್ಮಿಕರ ಆರೋಗ್ಯ ದೃಷ್ಟಿಯಿಂದಲೂ ಅಗತ್ಯ ಸೌಲಭ್ಯ ಒದಗಿಸಬೇಕೆಂದು ಪ್ರತಿಭಟನಾಕಾರರು ಸರ್ಕಾರವನ್ನು ಒತ್ತಾಯಿಸಿದರು.
ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ತಾರಕಕ್ಕೇರಿದ ಕೈ ಕಮಲ ಯುದ್ಧ: ಬಿಜೆಪಿಯಲ್ಲಿ ಜೈಲು ಬೇಲು ಆದವರು ಬ್ಯಾಟಿಂಗ್ ಬೌಲಿಂಗ್ ಮಾಡ್ತಿಲ್ವಾ ಎಂದು ಕಾಂಗ್ರೆಸ್ ಘರ್ಜನೆ
ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣದ ಹಿನ್ನೆಲೆಯಲ್ಲಿ ಬಿ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರೂ ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ಸಂಘರ್ಷ ಮಾತ್ರ...








