ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಮುಡಾ ಪ್ರಕರಣದಲ್ಲಿ ಎಫ್ ಐಆರ್ ದಾಖಲಾಗಿದೆ.
ಇದರ ಬೆನ್ನಲ್ಲೇ ಗಂಗೇನಹಳ್ಳಿ ಡಿನೋಟಿಫಿಕೇಷನ್ ಪ್ರಕರಣ (Gangenahalli Denotification Case)ಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಲೋಕಾಯುಕ್ತ ಪೊಲೀಸರ ಎದುರು ಹಾಜರಾಗಿದ್ದಾರೆ.
ಲೋಕಾಯುಕ್ತ (Karnataka lokayukta) ಪೊಲೀಸರು ನೋಟಿಸ್ ನೀಡಿದ ಹಿನ್ನೆಲೆಯಲ್ಲಿ ದೆಹಲಿಯಿಂದ ನೇರವಾಗಿ ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಈ ವೇಳೆ ಸುಮಾರು ಒಂದೂವರೆ ಗಂಟೆ ವಿಚಾರಣೆಗೆ ಹಾಜರಾಗಿದ್ದಾರೆ.
ಈ ಪ್ರಕರಣದಿಂದ ನನಗೆ ಯಾವುದೇ ತೊಂದರೆ ಆಗುವುದಿಲ್ಲ. ಸ್ವಯಂ ಪ್ರೇರಣೆಯಿಂದಲೇ ವಿಚಾರಣೆಗೆ ಹಾಜರಾಗಿದ್ದೇನೆ. ವಿಚಾರಣೆಗೆ ಮತ್ತೆ ಕರೆದರೂ ಹಾಜರಾಗುತ್ತೇನೆ. ಈ ವಿಚಾರವಾಗಿ ಯಡಿಯೂರಪ್ಪ ಕೂಡ ವಿಚಾರಣೆ ಎದುರಿಸಿದ್ದಾರೆ ಎಂದು ಹೇಳಿದ್ದಾರೆ.