ಭಾರಿ ಮಳೆಯಿಂದಾಗಿ ಉಜ್ಜಯಿನಿ ಮಹಾಕಾಳೇಶ್ವರ ದೇಗುಲದ ಗೋಡೆ ಕುಸಿತಗೊಂಡಿದ್ದು, ಇಬ್ಬರನ್ನು ಬಲಿ ಪಡೆದಿದೆ.
ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಭಾರೀ ಮಳೆಗೆ ಮಹಾಕಾಲ ದೇವಸ್ಥಾನದ ಹೊರಭಾಗದ ಗೋಡೆ ಕುಸಿದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ. ಅಲ್ಲದೇ, ಘಟನೆಯಲ್ಲಿ ಮತ್ತೆ ಇಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅಲ್ಲದೇ, ಉಜ್ಜಯಿನಿಯಲ್ಲಿ ಭಾರೀ ಮಳೆ ಮುಂದುವರಿದಿದ್ದು, ರಸ್ತೆಗಳಲ್ಲಿ ನೀರು ಸಂಗ್ರಹವಾಗಿದೆ. ಘಟನೆ ಕಂಡು ಜನ ಬೇಸರ ವ್ಯಕ್ತಪಡಿಸುತ್ತಿದ್ದಾರೆ.








